
ಬೆಂಗಳೂರು: ಸ್ಯಾಂಡಲ್ ವುಡ್ ನಟ ಅಜಯ್ ರಾವ್ ಹಾಗೂ ಪತ್ನಿ ಸ್ವಪ್ನಾ ರಾವ್ ನಡುವೆ ಎಲ್ಲವೂ ಸರಿಯಿಲ್ಲ. ಇಬ್ಬರ ದಾಂಪತ್ಯದಲ್ಲಿ ಬಿರುಕು ಮೂಡಿದೆ, ಪರಸ್ಪರ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆಂಬುದು ಸುದ್ದಿಗೆ ಗ್ರಾಸವಾಗಿತ್ತು. ಈ ನಡುವೆ ಸಪ್ನ ಅವರು ಪತಿಯೊಂದಿಗೆ ಕೂಡಿ ಬಾಳುವ ಮನಸ್ಸು ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಪ್ನ ಅವರು, ಹೊಂದಾಣಿಕೆ ಜೀವನ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ, ಗೌರವ ಮತ್ತು ಅವಳ ಭವಿಷ್ಯಕ್ಕಾಗಿ ನಾನು ಪ್ರತಿದಿನ ಧೈರ್ಯವನ್ನು ಕೂಡಿಸಿ, ನನಗೆ ತೀವ್ರವಾಗಿ ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಿದ್ದೇನೆ. ಪ್ರಿಯ ಸ್ನೇಹಿತರೇ ಮತ್ತು ಸಹೋದರರೇ. ಈ ಹಂತದಲ್ಲಿ ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನು ಪುನರ್‌ನಿರ್ಮಿಸಿಕೊಳ್ಳಲು ನಿಮ್ಮ ಹಾರೈಕೆಗಳು ಮತ್ತು ಪ್ರಾರ್ಥನೆಗಳನ್ನು ನಿಮ್ಮಲಿ ಕೇಳಿಕೊಳ್ಳುತ್ತಿದೇನೆಂದು ಹೇಳಿದ್ದಾರೆ.
ನಾನು ಅತ್ಯಂತ ಗೌರವದಿಂದ ತಿಳಿಸಲು ಬಯಸುವುದೇನೆಂದರೆ, ಈ ವಿಷಯವು ನಮ್ಮ ವೈಯಕ್ತಿಕ, ಆಳವಾದ ಭಾವನಾತ್ಮಕ ಮತ್ತು ದಾಂಪತ್ಯ ಜೀವನಕ್ಕೆ ಮಾತ್ರ ಸಂಬಂಧಿಸಿದ್ದು ಹೊರತು ಬೇರೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ತಿಳಿಸಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇದಕ್ಕೂ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದ ನಟ ಅಜಯ್ ರಾವ್ ಅವರು, ಈ ಸೂಕ್ಷ್ಮ ಸಮಯದಲ್ಲಿ ನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸುವಂತೆ ಹಾಗೂ ವೈಯಕ್ತಿಕ ವಿಷಯಗಳಿಗೆ ಸಂಬಂಧಿಸಿದ ಯಾವುದೇ ಸುದ್ದಿಯನ್ನು ಹಂಚಿಕೊಳ್ಳುವುದನ್ನ ಅಥವಾ ಹರಡುವುದನ್ನ ದೂರವಿಡುವಂತೆ ತಮ್ಮನ್ನು ವಿನಮ್ರವಾಗಿ ವಿನಂತಿಸುತ್ತೇನೆ. ಪ್ರತಿಯೊಂದು ಕುಟುಂಬ ಕೂಡ ಸವಾಲುಗಳನ್ನ ಎದುರಿಸುತ್ತದೆ. ಅವುಗಳನ್ನು ಖಾಸಗಿಯಾಗಿ ಉಳಿಯುವಂತೆ ಸಹಕರಿಸಿ ಎಂದು ಎಲ್ಲರಲ್ಲಿ ಹೃತ್ಪೂರ್ವಕ ವಿನಂತಿ ಮಾಡುತ್ತಿದ್ದೇನೆ ಎಂದು ಹೇಳಿದ್ದರು.
Advertisement