
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪ್ರಕಾರ ಮತ್ತೆ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಒಂದು ಸಿಹಿಸುದ್ದಿ ಸಿಕ್ಕಿದೆ. ಅವರ ಮುಂಬರುವ ಬಹು ನಿರೀಕ್ಷಿತ ಚಿತ್ರ ದಿ ಡೆವಿಲ್ ತೆರೆಗೆ ಬರಲು ಸಿದ್ಧತೆ ನಡೆಸುತ್ತಿದೆ.
ಜೈಲಿಗೆ ಹೋಗುವ ಮೊದಲೇ ದರ್ಶನ್ ಅವರು ಚಿತ್ರೀಕರಣ ಮತ್ತು ಡಬ್ಬಿಂಗ್ ಕಾರ್ಯ ಮುಗಿಸಿಕೊಂಡಿದ್ದು ಚಿತ್ರತಂಡಕ್ಕೆ ಅನುಕೂಲವಾಗಿದೆ. ಅವರ ಅನುಪಸ್ಥಿತಿಯಲ್ಲಿ ಚಿತ್ರ ತೆರೆಗೆ ಬರಲು ಯಾವುದೇ ತೊಂದರೆಯಾಗದಂತೆ ತಂಡ ಕೆಲಸ ಮಾಡುತ್ತಿದೆ.
ಚಿತ್ರದ ಇದ್ರೆ ನೆಮ್ದಿಯಾಗ್ ಇರ್ಬೇಕು ಹಾಡಿನ ಸಾಲುಗಳು ಬಹಳ ಸುದ್ದಿ ಮಾಡುತ್ತಿದೆ. ಈ ಹಾಡು ಇದೇ ಭಾನುವಾರ ಬೆಳಗ್ಗೆ 10 ಗಂಟೆಗೆ ಬಿಡುಗಡೆಯಾಗುತ್ತಿದೆ. ಇನ್ನು ದರ್ಶನ್ ಅವರ ಸೋಷಿಯಲ್ ಮೀಡಿಯಾ ಅಕೌಂಟ್ ನ್ನು ಅವರ ಪತ್ನಿ ವಿಜಯಲಕ್ಷ್ಮಿ ನೋಡಿಕೊಳ್ಳುತ್ತಿದ್ದಾರೆ. ಅವರ ಸೋಷಿಯಲ್ ಮೀಡಿಯಾ ಖಾತೆಯಿಂದಲೇ ವಿಷಯ ಹಂಚಿಕೊಂಡಿದ್ದಾರೆ.
Advertisement