
ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿದ್ದಾರೆ. ಈ ಮಧ್ಯೆ ಇಂದು ಅವರ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಸಿನಿಮಾದ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ.
ಅದರ ಮೊದಲ ಹಂತವಾಗಿ ಚಿತ್ರದ ಮೊದಲ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಸಾಹಿತ್ಯ ಹಾಡು ಇಂದು ಬಿಡುಗಡೆಯಾಗಿದೆ. ಎಂದಿನಂತೆ ದರ್ಶನ್ ಸ್ಟೈಲ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಹಾಡು ಬಿಡುಗಡೆಯಾದ ಒಂದೇ ಗಂಟೆಯಲ್ಲಿ 8 ಲಕ್ಷಕ್ಕೂ ಅಧಿಕ ಮಂದಿ ಯೂಟ್ಯೂಬ್ ನಲ್ಲಿ ವೀಕ್ಷಣೆ ಮಾಡಿದ್ದಾರೆ.
ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ದೀಪಕ್ ಬ್ಲೂ ಹಾಡಿಗೆ ಧ್ವನಿಯಾಗಿದ್ದಾರೆ.
ದರ್ಶನ್ ಜೊತೆ ನಾಯಕಿಯರಾಗಿ ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ‘ದಿ ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರಿಗೆ ಈ ಮೊದಲು ಹೈಕೋರ್ಟ್ ಜಾಮೀನು ನೀಡಿತ್ತು. ಆಗ ‘ದಿ ಡೆವಿಲ್’ ಸಿನಿಮಾದ ಶೂಟಿಂಗ್ ಮತ್ತು ಡಬ್ಬಿಂಗ್ ಕೆಲಸಗಳನ್ನು ಅವರು ಮುಗಿಸಿಕೊಟ್ಟರು.
ಅಂದುಕೊಂಡಂತೆ ಆಗಿದ್ದರೆ, ಆಗಸ್ಟ್ 15ರಂದು ಈ ಹಾಡು ಬಿಡುಗಡೆ ಆಗಬೇಕಿತ್ತು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಕಾರಣದಿಂದಾಗಿ, ಆಗಸ್ಟ್ 14ರಂದು ದರ್ಶನ್ ಮತ್ತೆ ಜೈಲುಪಾಲಾದರು.
Advertisement