
ನಟ ದರ್ಶನ್ ಅಭಿಮಾನಿಗಳಿಗೆ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಡಬಲ್ ಸಿಹಿಸುದ್ದಿ. ಅವರ ನೆಚ್ಚಿನ ನಾಯಕ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಇಂದು ಬಿಡುಗಡೆಯಾದ ಚಿತ್ರದ ಮೊದಲ ಇದ್ರೆ ನೆಮ್ದಿಯಾಗಿರ್ಬೇಕು ಹಾಡನ್ನು ಭಾರೀ ಕ್ರೇಝ್ ನಿಂದ ಬರಮಾಡಿಕೊಂಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ, ಯೂಟ್ಯೂಬ್ ನಲ್ಲಿ ಹಾಡು ಟ್ರೆಂಡಿಂಗ್ ನಲ್ಲಿದೆ. ದರ್ಶನ್ ಜೈಲಿಗೆ ಹೋಗುವ ಮುನ್ನ ‘ದಿ ಡೆವಿಲ್’ ಸಿನಿಮಾದ ತಮ್ಮ ಪಾಲಿನ ಎಲ್ಲ ಕೆಲಸಗಳನ್ನು ಮುಗಿಸಿಕೊಟ್ಟಿದ್ದಾರೆ. ದರ್ಶನ್ ಅನುಪಸ್ಥಿತಿಯಲ್ಲೇ ‘ದಿ ಡೆವಿಲ್’ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ.
ಡಿ.12ಕ್ಕೆ ಬಿಡುಗಡೆ
ಈಗ ಈ ಚಿತ್ರದ ರಿಲೀಸ್ ದಿನಾಂಕ (The Devil Movie Release Date) ಪ್ರಕಟಿಸಲಾಗಿದೆ. ಇದೇ ವರ್ಷ ಡಿಸೆಂಬರ್ 12ರಂದು ‘ದಿ ಡೆವಿಲ್’ ಸಿನಿಮಾ ಅದ್ದೂರಿಯಾಗಿ ತೆರೆಕಾಣಲಿದೆ. ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ‘ದಿ ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಕಾಶ್ ವೀರ್ ನಿರ್ದೇಶನ, ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ.
ಚಿತ್ರದ ಬಗ್ಗೆ ಅಭಿಮಾನಿಗಳು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 2011ರಲ್ಲಿ ದರ್ಶನ್ ಜೈಲುಪಾಲಾಗಿದ್ದಾಗ ಅವರ ಸಾರಥಿ ಸಿನಿಮಾ ಬಿಡುಗಡೆಯಾಗಿ ಯಶಸ್ಸು ಕಂಡಿತ್ತು.
Advertisement