
ಕನ್ನಡದ ಜನಪ್ರಿಯ ನಿರೂಪಕಿ ಅನುಶ್ರೀ ಅವರು ರೋಷನ್ ಎಂಬುವವರ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಲಿದ್ದಾರೆ. ಈ ಇಬ್ಬರ ಮದುವೆ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ನಡೆಯಲಿದೆ.
ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಲಿದ್ದಾರೆ. ತುಂಬಾ ಸರಳವಾಗಿರುವ ಅವರ ವಿವಾಹ ಆಮಂತ್ರಣ ಪತ್ರಿಕೆಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು.
ಕಿರುತೆರೆ ಕಲಾವಿದರು ಮತ್ತು ಚಿತ್ರೋದ್ಯಮದ ಗಣ್ಯರಿಗೆ ಅನುಶ್ರಿ ಆಹ್ವಾನ ನೀಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಮದುವೆಗೆ ಹಾಜರಾಗುವ ನಿರೀಕ್ಷೆ ಇದೆ. ನಿನ್ನೆ ಗಣೇಶ ಚತುರ್ಥಿ ದಿನ ಮದುವೆ ಮುಂಚಿನ ಹಳದಿಶಾಸ್ತ್ರ ಕಾರ್ಯಗಳು ನೆರವೇರಿದ್ದವು.
Advertisement