

ಶಿವಮೊಗ್ಗ: ಸ್ಯಾಂಡಲ್ವುಡ್ ನಿರ್ದೇಶಕ ಸಂಗೀತ್ ಸಾಗರ್ ಚಿತ್ರ 'ಪಾತ್ರಧಾರಿ' ಶೂಟಿಂಗ್ ವೇಳೆ ಕೊಪ್ಪದಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಚಿತ್ರೀಕರಣದ ವೇಳೆ ಸ್ಯಾಂಡಲ್ವುಡ್ ನಿರ್ದೇಶಕನಿಗೆ ಹೃದಯಘಾತ ಸಂಭವಿಸಿದೆ. ಸಂಗೀತ್ ಸಾಗರ್ ಎಂಬ ನಿರ್ದೇಶಕ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಪಾತ್ರಧಾರಿ ಎಂಬ ಸಿನಿಮಾ ಮಾಡುತ್ತಿದ್ದ ಸಂಗೀತ್ ಸಾಗರ್ ಶೂಟಿಂಗ್ ಮಾಡುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿದೆ.
ಕೊಪ್ಪ ತಾಲೂಕಿನಲ್ಲಿ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಆಕ್ಷನ್ ಹೇಳುವ ವೇಳೆಯೇ ಸಂಗೀತ್ ಸಾಗರ್ ಗೆ ಹೃದಯಘಾತ ಸಂಭವಿಸಿದ್ದು, ತಕ್ಷಣ ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆತರಲಾಗಿತ್ತು. ಚಿಕಿತ್ಸೆ ಫಲಿಸದೆ ನಿರ್ದೇಶಕ ಸಂಗೀತ್ ಸಾಗರ್ ನಿಧನರಾಗಿದ್ದಾರೆ.
ಹಾಸ್ಯ ಕಲಾವಿದ ಸಂಜು ಬಸಯ್ಯ ಅವರಿಗೆ ಆ್ಯಕ್ಷನ್ ಹೇಳಿದ್ದರು. ಆ ವೇಳಗಾಗಲೇ ಸುಸ್ತಾಗಿ ಸಂಗೀತ್ ಸಾಗರ್ ಕುಸಿದಿದ್ದರು. ಎಂಟಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಇವರು ನಿರ್ದೇಶಿಸಿದ್ದರು. ಇವರು ಸಕಲೇಶಪುರದ ದೊಡ್ಡನಾಗರ ಮೂಲದವರು. 20 ದಿನಗಳಿಂದ ಹರಿಹರಪುರ, ತೀರ್ಥಹಳ್ಳಿ ತಾಲೂಕು ಸುತ್ತಮುತ್ತ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ನಾಳೆ ಕುಂಬಳಕಾಯಿ ಶಾಸ್ತ್ರ ಮಾಡಿ ಕೊನೆಯ ಚಿತ್ರೀಕರಣ ಮಾಡಬೇಕಿತ್ತು.
Advertisement