

ಬೆಂಗಳೂರು: 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಜನವರಿ 29 ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗೆ ಚಲನಚಿತ್ರಗಳನ್ನು ಆಹ್ವಾನಿಸಿದೆ.
2025ರ ಜನವರಿ 29ರಿಂದ ಫೆಬ್ರುವರಿ 6ರವರೆಗೆ ಒಟ್ಟು 9 ದಿನಗಳ ಕಾಲ ಚಲನಚಿತ್ರೋತ್ಸವವು ನಡೆಯಲಿದೆ. ಚಲನಚಿತ್ರೋತ್ಸವದಲ್ಲಿ 2025ರ ಜನವರಿ 1ರಿಂದ 2025ರ ಡಿಸೆಂಬರ್ 31ರ ಒಳಗೆ ತಯಾರಾಗಿರುವ ಚಲನಚಿತ್ರಗಳನ್ನು ಸ್ಪರ್ಧೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕೇಂದ್ರೀಯ ಚಲನಚಿತ್ರ ಸೆನ್ಸಾರ್ ಮಂಡಳಿ (ಸಿಬಿಎಫ್‌ಸಿ) ಪ್ರಮಾಣ ಪತ್ರದಲ್ಲಿ ನಮೂದಿಸುವ ದಿನಾಂಕವನ್ನೇ ನಿರ್ಮಾಣದ ದಿನಾಂಕ ಎಂದು ಪರಿಗಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಒಟ್ಟು ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಡಿಸೆಂಬರ್ 6ರಿಂದ 31ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಚಲನಚಿತ್ರೋತ್ಸವ ಜಾಲತಾಣ www.biffes.org, ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಪ್ರತಿ ಅರ್ಜಿಗೂ 3,000 ರೂ.ಶುಲ್ಕ ಅನ್ವಯವಾಗುತ್ತದೆ. ಸ್ಪರ್ಧೆಗೆ ಸಲ್ಲಿಸುವ ಚಲನಚಿತ್ರಗಳು ಇಂಗ್ಲಿಷ್ ಉಪಶೀರ್ಷಿಕೆ ಒಳಗೊಂಡಿರಬೇಕು ಎಂದು ಮಾಹಿತಿ ನೀಡಿದೆ.
ಹೆಚ್ಚಿನ ಮಾಹಿತಿಗೆ 8904645529 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಅಥವಾ biffesblr@gmail.comಗೆ ಇ–ಮೇಲ್ ಮಾಡಬಹುದಾಗಿದೆ.
Advertisement