

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಡೆವಿಲ್’ ಸಿನಿಮಾ ಇದೇ ಡಿಸೆಂಬರ್ 11ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಮೇಲೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ನಾಳೆ ಮಧ್ಯಾಹ್ನ 1: 0ರಿಂದಈ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ ಓಪನ್ ಓಪನ್ ಆಗಲಿದೆ.
ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಬೆಂಗಳೂರು, ಶಿವಮೊಗ್ಗದ ವೀರಭದ್ರೇಶ್ವರ ಚಿತ್ರಮಂದಿರ ಸೇರಿದಂತೆ ರಾಜ್ಯದ ವಿವಿಧೆಡೆ ಚಿತ್ರಮಂದಿರಗಳ ಮೇಲೆ ದರ್ಶನ್ ಅವರ ಕಟೌಟ್ ಗಳು ರಾರಾಜಿಸುತ್ತಿವೆ.
ಬೆಂಗಳೂರಿನ ನವರಂಗ ಚಿತ್ರಮಂದಿರದ ಮುಂಭಾಗ ಪಟಾಕಿ ಸಿಡಿಸಿ, ಬೃಹತ್ ಮೂರು ಕಟೌಟ್ ಹಾಕುವ ಮೂಲಕ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಶಿವಮೊಗ್ಗದಲ್ಲಿಯೂ ಇದೇ ರೀತಿ ಭರ್ಜರಿ ಸಿದ್ಧತೆ ನಡೆಸಲಾಗಿದೆ.
ಇನ್ನೂ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕೇವಲ ಅರ್ಧ ಗಂಟೆಯಲ್ಲಿ 3 ಲಕ್ಷ ಮಂದಿ ಟ್ರೇಲರ್ ವೀಕ್ಷಿಸಿದ್ದಾರೆ. ಹೊಸ ಅವತಾರದಲ್ಲಿ ದರ್ಶನ್ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಸಿನಿಮಾ ಬಗ್ಗೆ ಟ್ರೇಲರ್ ನಿರೀಕ್ಷೆ ಹೆಚ್ಚಿಸಿದೆ.
ದರ್ಶನ್ ಅವರು ಟ್ರೇಲರ್ನಲ್ಲಿ ಹಲವು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲಿಶ್ ಲುಕ್, ಮಾಸ್ ಡೈಲಾಗ್ ಗಮನ ಸೆಳೆಯುವಂತಿದೆ. ‘ಸೂರ್ಯಂಗೆ ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನು ಬರ್ತಿದೀನಿ ಚಿನ್ನ’ ಎಂದು ದರ್ಶನ್ ಡೈಲಾಗ್ ಹೇಳುವಾಗ ರಿಲೀಸ್ ದಿನಾಂಕ ತೋರಿಸಲಾಗುತ್ತದೆ.
Advertisement