

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಖುಷಿಯ ಸುದ್ದಿಯಿದೆ.ಅವರ ನಟನೆಯ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಡೆವಿಲ್’ ಸಿನಿಮಾ ಇದೇ ಡಿಸೆಂಬರ್ 11ರಂದು ರಿಲೀಸ್ ಆಗುತ್ತಿದೆ. ಇದಕ್ಕೂ ಒಂದು ವಾರ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕೇವಲ ಅರ್ಧ ಗಂಟೆಯಲ್ಲಿ 3 ಲಕ್ಷ ಮಂದಿ ಟ್ರೇಲರ್ ವೀಕ್ಷಿಸಿದ್ದಾರೆ.
ಹೊಸ ಅವತಾರದಲ್ಲಿ ದರ್ಶನ್ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಸಿನಿಮಾ ಬಗ್ಗೆ ಟ್ರೇಲರ್ ನಿರೀಕ್ಷೆ ಹೆಚ್ಚಿಸಿದೆ. ದರ್ಶನ್ ಅವರು ಟ್ರೇಲರ್ನಲ್ಲಿ ಹಲವು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲಿಶ್ ಲುಕ್, ಮಾಸ್ ಡೈಲಾಗ್ ಗಮನ ಸೆಳೆಯುವಂತಿದೆ. ‘ಸೂರ್ಯಂಗೆ ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನು ಬರ್ತಿದೀನಿ ಚಿನ್ನ’ ಎಂದು ದರ್ಶನ್ ಡೈಲಾಗ್ ಹೇಳುವಾಗ ರಿಲೀಸ್ ದಿನಾಂಕ ತೋರಿಸಲಾಗುತ್ತದೆ.
‘ಡೆವಿಲ್’ ಸಿನಿಮಾಗೆ ಪ್ರಕಾಶ್ ನಿರ್ದೇಶನವಿದೆ. ದರ್ಶನ್ ಮತ್ತು ಪ್ರಕಾಶ್ ಈ ಹಿಂದೆ ತಾರಕ್ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿದ್ದಾರೆ. ಅವರು ಇಲ್ಲದೆ ಅಭಿಮಾನಿಗಳು ಮತ್ತು ಚಿತ್ರತಂಡ ಪ್ರಚಾರದಲ್ಲಿ ನಿರತವಾಗಿದೆ. ಈಗಾಗಲೇ ಹಾಡುಗಳು ಗಮನ ಸೆಳೆದಿವೆ. ಈಗ ಟ್ರೇಲರ್ ರಿಲೀಸ್ ಆಗಿದ್ದು ನಿರೀಕ್ಷೆ ಹೆಚ್ಚಿದೆ.
‘ಡೆವಿಲ್’ ಸಿನಿಮಾದಲ್ಲಿ ದರ್ಶನ್ಗೆ ನಾಯಕಿಯಾಗಿ ರಚನಾ ರೈ ನಟಿಸಿದ್ದಾರೆ. ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್, ಶರ್ಮಿಳಾ ಮಾಂಡ್ರೆ, ಶೋಭರಾಜ್ ಮೊದಲಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕೆ ಇದೆ. ಪ್ರಕಾಶ್ ಹಾಗೂ ಜಯಮ್ಮ ಚಿತ್ರ ನಿರ್ಮಿಸಿದ್ದಾರೆ.
Advertisement