

ಆಂಧ್ರ ಪ್ರದೇಶದಲ್ಲಿ ಗುಮ್ಮಡಿ ನರಸಯ್ಯ ಅವರು ಸಾಕಷ್ಟು ಖ್ಯಾತಿ ಹೊಂದಿದ್ದಾರೆ. 5 ಬಾರಿ ಶಾಸಕರಾಗಿದ್ದರೂ ತಮ್ಮ ಸರಳ ವ್ಯಕ್ತಿತ್ವ, ಜೀವನಶೈಲಿಯಿಂದ ಜನಪ್ರಿಯರಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ.
ಇಂದು ಅವರ ಹೆಸರಿನಲ್ಲಿ ತೆಲುಗಿನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಅದರಲ್ಲಿ ಹೀರೋ ಆಗಿ ನಟಿಸುತ್ತಿರುವವರು ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದೆ. ಇಂದು ಚಿತ್ರಕ್ಕೆ ಮುಹೂರ್ತ ನಡೆಯಲಿದೆ.
‘ಗುಮ್ಮಡಿ ನರಸಯ್ಯ’ ಸಿನಿಮಾದ ಮೂಲಕ ಶಿವರಾಜ್ಕುಮಾರ್ ಅವರು ಹೀರೋ ಆಗಿ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ನಿವಾಸಕ್ಕೆ ಶಿವಣ್ಣ ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ ಜೊತೆ ಭೇಟಿ ನೀಡಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.
ಮಾಜಿ ಶಾಸಕ ಗುಮ್ಮಡಿ ನರಸಯ್ಯ ಅವರ ಜೀವನಧಾರಿತ ಸಿನಿಮಾದಲ್ಲಿ ಶಿವರಾಜ್ಕುಮಾರ್ ಅವರು ನಟಿಸಲಿದ್ದಾರೆ. ಗುಮ್ಮಡಿ ನರಸಯ್ಯ ಅವರ ಪಾತ್ರವನ್ನು ಶಿವಣ್ಣ ಮಾಡಲಿದ್ದಾರೆ. ಹಾಗಾಗಿ ಭೇಟಿ ಮಾಡಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದೆ.
Advertisement