

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ ಖಾತೆಗಳ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ ಎಂದು ಪ್ರಶ್ನಿಸಿ ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಹೇಳಿಕೆ ನೀಡಿದ್ದರು.
ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮಿ ಅವರ ವಿರುದ್ಧ ನಿಂದನೆಗಳ ಪೋಸ್ಟ್ ಪ್ರಕಟವಾಗುತ್ತಿದೆ. ನಿಂದನೆಯ ವಿರುದ್ಧ ಸಿಡಿದ ವಿಜಯಲಕ್ಷ್ಮಿ 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ಫೋಟೋ ಸಮೇತ ದೂರು ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮಗಳು ವಿಜಯಲಕ್ಷ್ಮಿ ಅವರನ್ನು ಮಾತನಾಡಲು ಪ್ರಯತ್ನಿಸಿದವು. ಆದರೆ ವಿಜಯಲಕ್ಷ್ಮಿ ಯಾವುದೇ ಪ್ರತಿಕ್ರಿಯೆ ನೀಡದೇ ಕಾರು ಹತ್ತಿ ತೆರಳಿದರು. ವಿಜಯಲಕ್ಷ್ಮೀ ಖಾತೆಗೆ ಬಂದ ಕಾಮೆಂಟ್ಗಳು ಸುದೀಪ್ ಅಭಿಮಾನಿಗಳದ್ದೇ ಎಂಬ ಅನುಮಾನ ಮೂಡಿದೆ. ಏಕೆಂದರೆ ಕೆಲವು ಖಾತೆಗಳು ಸುದೀಪ್ ಅಭಿಮಾನಿಗಳ ಹೆಸರಲ್ಲಿ ಇದೆ.
ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ್ದಾರೆ ವಿಜಯಲಕ್ಷ್ಮಿ. ಅಲ್ಲದೇ ಕೆಟ್ಟದಾಗಿ ಕಾಮೆಂಟ್ಸ್ ಮಾಡಿದ ಖಾತೆಗಳ ಸ್ಕ್ರೀನ್‌ಶಾಟ್‌ಗಳನ್ನು ಸಹ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಕ್ಲಾಸ್ ಫ್ಯಾನ್ಸ್ ಎಂದು ಕರೆಯಲ್ಪಡುವ ಎಲ್ಲರಿಗೂ ನಿಮ್ಮ ಮಟ್ಟವನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದಕ್ಕಾಗಿ ಧನ್ಯವಾದಗಳು.
ಈ ಖಾತೆಗಳ ವಿರುದ್ಧ ಪೊಲೀಸ್ ದೂರುಗಳನ್ನು ದಾಖಲಿಸಲಾಗಿದೆ. ಅಭಿಮಾನದ ಹೆಸರಲ್ಲಿ ಇನ್ನುಮುಂದೆ ಕಿರುಕುಳ ನಡೆಯುವುದಿಲ್ಲ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
Advertisement