ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನ ಪ್ರಯತ್ನ 'ಕರಿಕಾಡ'

ಕಾಡ ನಟರಾಜ್ ನಾಯಕ ನಟನಾಗಿ ಅಭಿನಯಿಸಿರೋ ಈ ಸಿನಿಮಾದಲ್ಲಿ ಬಲರಾಜವಾಡಿ , ಯಶ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ತುಳು ಚಿತ್ರರಂಗದ ಚೆಲುವೆ ನಿರೀಕ್ಷಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
Karikada poster
ಕರಿಕಾಡ ಪೋಸ್ಟರ್
Updated on

ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನ ಪ್ರಯತ್ನದ “ಕರಿಕಾಡ” ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಇದೊಂದು ಮ್ಯೂಸಿಕಲ್ ಜರ್ನಿ & ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ. ಸಾಹಸಮ ದೃಶ್ಯಕಾವ್ಯವಾಗಿ, ಪ್ರೇಮಕಥೆಯ ರೂಪಕವಾಗಿ, ನಮ್ಮ ಮಣ್ಣಿನ ಸೊಗಡನ್ನ ಸೂಸುವಂತಹ ಕಥಾಹಂದರ ಹೊಂದಿರುವಂತೆ ಕಾಣುತ್ತಿದೆ. ರಿವೇಂಜ್ ಸ್ಟೋರಿಯಂತೆ ಭಾಸವಾಗುವ ಈ ಸಿಮಾದ ತಾರಾಗಣ ಮತ್ತು ತಾಂತ್ರಿಕತೆ ಗಮನ ಸೆಳೆಯುತ್ತಿದೆ.

ಕಾಡ ನಟರಾಜ್ ನಾಯಕ ನಟನಾಗಿ ಅಭಿನಯಿಸಿರೋ ಈ ಸಿನಿಮಾದಲ್ಲಿ ಬಲರಾಜವಾಡಿ , ಯಶ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ತುಳು ಚಿತ್ರರಂಗದ ಚೆಲುವೆ ನಿರೀಕ್ಷಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

Karikada poster
ಕನ್ನಡ ನಟರು ಬೇರೆ ಭಾಷೆಗಳಲ್ಲಿ ಅತಿಥಿ ಪಾತ್ರ ಮಾಡುತ್ತಾರೆ, ಪರಭಾಷೆಯವರು ಇಲ್ಲಿಗೆ ಬರುವುದಿಲ್ಲ: ಕಿಚ್ಚ ಸುದೀಪ್

ಈ ಚಿತ್ರದಲ್ಲಿ ಮಂಜು ಸ್ವಾಮಿ , ಗೋವಿಂದ ಗೌಡ , ದೀವಾಕರ್ , ಕಾಮಿಡಿ ಕಿಲಾಡಿ ಸೂರ್ಯ , ದಿ.ರಾಕೇಶ್ ಪೂಜಾರಿ , ವಿಜಯ್ ಚಂಡೂರು , ಚಂದ್ರಪ್ರಭ , ಕರಿಸುಬ್ಬು , ಗಿರಿ , ಮಾಸ್ಟರ್ ಆರ್ಯನ್ , ಬಾಲನಟಿ ರಿದ್ಧಿ , ಹಾಗೂ ಮುಂತಾದವರು.

ರಿದ್ಧಿ ಎಂಟರ್ಟೈನ್ಮೆಂಟ್ಸ್ ಬ್ಯಾನರ್ನಡಿ ಕಾಡ ನಟರಾಜ್ ಅವರ ಧರ್ಮಪತ್ನಿ ದೀಪ್ತಿ ದಾಮೋದರ್ ತನ್ನ ಪತಿಯ ಕನಸಿನ ಗುರಿಗೆ ದಾರಿ ತೋರಿಸಿದ್ದಾರೆ. ರವಿಕುಮಾರ್ ಎಸ್.ಆರ್ ಸಹ ನಿರ್ಮಾಣದ ಸಾಥ್ ನೀಡಿದ್ದಾರೆ. ಕರಿಕಾಡ ಚಿತ್ರಕ್ಕೆ ಗಿಲ್ಲಿ ವೆಂಕಟೇಶ್ ನಿರ್ದೇಶಿಸಿದ್ದು, ಕಾಡ ನಟರಾಜ ಅವರ ಕಥೆ ಇದೆ.

ಅತೀಶಯ್ ಜೈನ್ ಹಾಗೂ ಶಶಾಂಕ್ ಶೇಷಾಗಿರಿ ಸಂಗೀತ ಚಿತ್ರಕ್ಕಿದೆ. ಶಶಾಂಕ್ ಶೇಷಾಗರಿ ಅವರು ರಾಗ ಸಂಯೋಜನೆ ಜೊತೆಗೆ ಜಬರ್ದಸ್ತ್ ಹಿನ್ನಲೆ ಸಂಗೀತವನ್ನ ನೀಡಿದ್ದಾರೆ. ಜೀವನ್ ಗೌಡ ಕ್ಯಾಮರಾ ಕೆಲಸ ಮಾಡಿದ್ದಾರೆ. ದೀಪಕ್ ಸಿ.ಎಸ್ ಸಂಕಲನವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com