ಕುಂಭಮೇಳದಲ್ಲಿ ಪ್ರಕಾಶ್ ರೈ ಫೋಟೋ: ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲು

ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪೇಸ್‌ಬುಕ್‌ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಸಿದ್ದು, ಸುಳ್ಳು ಶೀರ್ಷಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Prakash Raj
ಪ್ರಕಾಶ್ ರಾಜ್
Updated on

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೊಟೋ ಹರಿಬಿಡುತ್ತಿರುವುದರ ವಿರುದ್ಧ ನಟ ಪ್ರಕಾಶ್ ರಾಜ್ ಅವರು ಪ್ರಶಾಂತ್ ಸಂಬರಗಿ ವಿರುದ್ಧ ಲಕ್ಷ್ಮಿಪುರಂ ಠಾಣೆಯಲ್ಲಿ ಶನಿವಾರ ಬೆಳಿಗ್ಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪೇಸ್‌ಬುಕ್‌ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಸಿದ್ದು, ಸುಳ್ಳು ಶೀರ್ಷಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಶಾಂತ್ ಸಂಬರಗಿ ಅವರಿಗೆ ಇ ಮೇಲ್ ಮೂಲಕ ನೋಟಿಸ್ ಕಳುಹಿಸಿದ್ದು, ತನಿಖೆ ಮುಂದುವರೆದಿದೆ' ಎಂದು ಪೊಲೀಸರು ತಿಳಿಸಿದರು.

ಪ್ರಶಾಂತ್ ಸಂಬರಗಿ ನಟಿಯರೂ ಸೇರಿದಂತೆ ಅನೇಕರಿಗೆ ಈ ರೀತಿ ತೊಂದರೆ ನೀಡಿದ್ದು, ಆತನಿಗೆ ಪಾಠ ಕಲಿಸಬೇಕು, ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿ ಹರಡುವವರಿಗೂ ಇದೊಂದು ಪಾಠವಾಗಬೇಕು ಎಂಬ ಕಾರಣಕ್ಕೆ ದೂರು ನೀಡಿದ್ದೇನೆ' ಎಂದು ನಟ ಪ್ರಕಾಶ್ ರಾಜ್ ತಿಳಿಸಿದರು. ತಪ್ಪು ಪ್ರಚಾರ ಮಾಡುವುದು,‌ ಅನುಮತಿ ಇಲ್ಲದೆ ಯಾರದೋ ಫೋಟೊಗಳನ್ನು ಬಳಸುವುದು ಅಕ್ಷಮ್ಯ ಅಪರಾಧ' ಎಂದರು.

ಕುಂಭಮೇಳದಲ್ಲಿನ ಪುಣ್ಯಸ್ನಾನದ ಬಗ್ಗೆ ಪ್ರಶ್ನಿಸಿದಾಗ 'ಸ್ನಾನ ಮಾಡುವುದರಲ್ಲಿ ತಪ್ಪೇನಿದೆ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆಯಿಲ್ಲ. ಮನುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗೆಂದು ಅವರ ನಂಬಿಕೆಯನ್ನು ಪ್ರಶ್ನಿಸುವುದಿಲ್ಲ. ಆದರೆ ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು' ಎಂದರು.

Prakash Raj
ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸುವುದೇ ಕೆಲಸ: Maha kumbh AI ಫೋಟೋ ಬಗ್ಗೆ Prakash Raj; ಕೇಸ್ ದಾಖಲು!

ಕುಂಭಮೇಳದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿರುವುದರ ಬಗ್ಗೆ ಪ್ರಶ್ನಿಸಿದಾಗ, 'ಅವರವರ ಭಾವಕ್ಕೆ ಅವರ ಬಕುತಿಗೆ ಹೇಳುತ್ತಾ ಹೋಗಲಿ. ನಾನು ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಯಾವ ನಂಬಿಕೆಯ ಬಗ್ಗೆ ಟೀಕೆ ಮಾಡಲ್ಲ' ಎಂದು ತಿಳಿಸಿದರು.

'ಪ್ರಕಾಶ್ ರಾಜ್ ಅವರು ಎಡಪಂಕ್ತೀಯ ಚಿಂತನೆಗಳಿಂದ ಪ್ರಭಾವಿತರಾದವರು. ಅವರು ಬಿಜೆಪಿ ನಿರ್ಧಾರಗಳನ್ನು ಸಾಕಷ್ಟು ಟೀಕೆ ಮಾಡುತ್ತಾ ಇರುತ್ತಾರೆ. ಈಗ ಅವರು ಕುಂಭ ಮೇಳದಲ್ಲಿ ಭಾಗಿ ಆಗಿ ಪವಿತ್ರ ಸ್ನಾನ ಮಾಡುತ್ತಿರುವ ರೀತಿಯಲ್ಲಿ ಎಐ ಫೋಟೋ ಮಾಡಲಾಗಿತ್ತು. ಪೋಟೋ ವೈರಲ್ ಮಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರೈ ದೂರು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com