ಕೊನೆಗೂ ಫಲಿಸಿದ ಅಭಿಮಾನಿಗಳ ಹಾರೈಕೆ; 'ಶಿವಣ್ಣ ಈಗ ಕ್ಯಾನ್ಸರ್ ಫ್ರೀ'.. ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ಗೀತಕ್ಕ!

ಶಸ್ತ್ರಚಿಕಿತ್ಸೆ ಬಳಿಕ ಇದೇ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಗೀತಕ್ಕ ಮತ್ತು ಶಿವಣ್ಣ ಅಭಿಮಾನಿಗಳಿಗೆ ಹೊಸ ವರ್ಷದ ಶುಭ ಕೋರಿದ್ದಾರೆ.
Actor Shivaraj Kumar appears for the first time after surgery
ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್
Updated on

ವಾಷಿಂಗ್ಟನ್: ಆನಾರೋಗ್ಯದ ನಿಮಿತ್ತ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಬಳಿಕ ಇದೇ ಮೊದಲ ಬಾರಿಗೆ ಕಾಣಿಸಿಕೊಂಡಿದ್ದು ಅಭಿಮಾನಿಗಳಿಗೆ ಮತ್ತು ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭ ಕೋರಿದ್ದಾರೆ. ಅಲ್ಲದೆ ಮಾರಕ ಕ್ಯಾನ್ಸರ್ ಪೀಡೆಯಿಂದ ಶಿವಣ್ಣ ಗುಣಮುಖರಾಗಿದ್ದಾರೆ ಎಂದು ಗೀತಕ್ಕ ಹೇಳಿದ್ದಾರೆ.

ಹೌದು.. ಅಮೆರಿಕದ ಮಿಯಾಮಿ ಕ್ಯಾನ್ಸರ್ ಹಾಸ್ಪಿಟಲ್‌ನಲ್ಲಿ ನಡೆದಿದ್ದ ನಟ ಶಿವರಾಜ್ ಕುಮಾರ್ ಕಿಡ್ನಿ ಶಸ್ತ್ರಚಿಕಿತ್ಸೆ ಯಶಸ್ಸಿನ ಬೆನ್ನಲ್ಲೇ ಇದೀಗ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಶಿವಣ್ಣನ ಎಲ್ಲ ಮೆಡಿಕಲ್ ರಿಪೋರ್ಟ್ ಗಳೂ ನೆಗೆಟಿವ್ ಬಂದಿದೆ ಎಂದು ಹೇಳಿದ್ದಾರೆ.

Actor Shivaraj Kumar appears for the first time after surgery
ಹಿರಿಯ ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿ: ವೈದ್ಯರ ಮಾಹಿತಿ

ಶಸ್ತ್ರಚಿಕಿತ್ಸೆ ಬಳಿಕ ಇದೇ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಗೀತಕ್ಕ ಮತ್ತು ಶಿವಣ್ಣ ಅಭಿಮಾನಿಗಳಿಗೆ ಹೊಸ ವರ್ಷದ ಶುಭ ಕೋರಿದ್ದಾರೆ. ಇದೇ ವೇಳೆ ಅವರು ನಟ ಶಿವರಾಜ್ ಕುಮಾರ್ ಅವರ ಎಲ್ಲ ವೈದ್ಯಕೀಯ ವರದಿಗಳು ನೆಗೆಟಿವ್ ಬಂದಿದ್ದು, ಅಭಿಮಾನಿಗಳ ಹಾರೈಕೆಯಿಂದ ಶಿವಣ್ಣ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.

'ಈ ಬಗ್ಗೆ ವೈದ್ಯರು ಅಧಿಕೃತ ಹೇಳಿಕೆ ನೀಡಿದ್ದು, ಅಭಿಮಾನಿಗಳು, ಗುರು-ಹಿರಿಯರ ಪ್ರಾರ್ಥನೆಯ ಫಲವಾಗಿ ಶಿವರಾಜ್ ಕುಮಾರ್ ಅವರು ಕ್ಯಾನ್ಸರ್ ನಿಂದ ಗುಣಮುಖರಾಗಿದ್ದಾರೆ. ನಿಮಗೆಲ್ಲರಿಗೂ ಧನ್ಯವಾದ ಎಂದು ಗೀತ ಶಿವರಾಜ್ ಕುಮಾರ್ ಹೇಳಿದ್ದಾರೆ.

ಬಳಿಕ ಮಾತನಾಡಿದ ನಟ ಶಿವರಾಜ್ ಕುಮಾರ್, 'ಅಭಿಮಾನಿಗಳ ದೇವರುಗಳ ಹಾರೈಕೆ ಮತ್ತು ಪ್ರಾರ್ಥನೆಯಿಂದ ಇಂದು ನಾನು ಗುಣಮುಖನಾಗಿದ್ದೇನೆ. ವೈದ್ಯರ ಅತ್ಯುತ್ತಮ ಚಿಕಿತ್ಸೆ ಮತ್ತು ನನ್ನ ಸ್ನೇಹಿತರು, ಸಹ ಕಲಾವಿದರ ಹಾರೈಕೆಯಿಂದಾಗಿ ನಾನು ಚೇತರಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಅಲ್ಲದೆ ಕ್ಯಾನ್ಸರ್ ಹೊರತಾಗಿಯೂ ತಾವು ಚಿತ್ರಗಳನ್ನು ಕಂಪ್ಲೀಟ್ ಮಾಡಿದ ಬಗ್ಗೆ ಮತ್ತು ಕ್ಯಾನ್ಸರ್ ವಿರುದ್ಧದ ತಮ್ಮ ಹೋರಾಟವನ್ನು ಶಿವಣ್ಣ ಭಾವುಕರಾಗಿ ಹೇಳಿದ್ದಾರೆ. ಅಲ್ಲದೆ ಗೀತಾ ಶಿವರಾಜ್ ಕುಮಾರ್ ಅವರಿಂದಲೇ ತಾವು ಇಂದು ಈ ಸ್ಥಿತಿಯಲ್ಲಿದ್ದೇನೆ. ನನ್ನ ಆರೋಗ್ಯ ಚೇತರಿಕೆಯಲ್ಲಿ ಗೀತಾ ಮತ್ತು ನನ್ನ ಮಗಳಾದ ನಿವೇದಿತಾ ಅವರ ಪಾತ್ರ ಬಹಳ ದೊಡ್ಡದು ಎಂದು ಶಿವಣ್ಣ ಹೇಳಿದ್ದಾರೆ.

ಅಲ್ಲದೆ ಚಿಕಿತ್ಸಾ ಪ್ರಕ್ರಿಯೆಯಲ್ಲಿ ನೆರವಾದ ಎಲ್ಲರಿಗೂ ಧನ್ಯವಾದ ಹೇಳಿದ ಶಿವಣ್ಣ, ಆಸ್ಪತ್ರೆ ಸಿಬ್ಬಂದಿಗಳಿಗೂ ಶಿವರಾಜ್ ಕುಮಾರ್ ಧನ್ಯವಾದ ಅರ್ಪಿಸಿದ್ದಾರೆ. ಅಂತೆಯೇ ಶಿವಣ್ಣ ಸೂನ್ ಬ್ಯಾಕ್ ಎಂದು ಅಭಿಮಾನಿಗಳಿಗೆ ಹೊಸ ವರ್ಷದ ಶುಭ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com