
ಬಹುಭಾಷಾ ನಟಿ ಹಾಗೂ ಕನ್ನಡತಿ ರಶ್ಮಿಕಾ ಮಂದಣ್ಣ ಅವರ ಅಭಿಮಾನಿಗಳಿಗೆ ಶಾಕಿಂಗ್ ವಿಚಾರವೊಂದು ಹೊರಬಿದ್ದಿದೆ. ನಟಿ ರಶ್ಮಿಕಾ ಮಂದಣ್ಣ ಅವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಶ್ಮಿಕಾ ಅವರು ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಪೆಟ್ಟು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಶ್ಮಿಕಾ ಅವರು ಸಲ್ಮಾನ್ ಖಾನ್ ನಟನೆಯ ಸಿಖಂದರ್ ಸಿನಿಮಾದ ಶೂಟಿಂಗ್‌ಗೆ ಹೋಗಬೇಕಿತ್ತು. ಇದರ ನಡುವೆಯೇ ರಶ್ಮಿಕಾ ಜಿಮ್‌ನಲ್ಲಿ ಪೆಟ್ಟು ಮಾಡಿಕೊಂಡಿದ್ದಾರೆ.
ದೃಷ್ಟವಶಾತ್ ರಶ್ಮಿಕಾ ಅವರಿಗೆ ಹೆಚ್ಚಿನ ಅನಾಹುತವಾಗಿಲ್ಲ. ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಪೆಟ್ಟಾಗಿದೆ ಎಂದು ಹೇಳಲಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಸದ್ಯ ಪೆಟ್ಟಾಗಿರುವ ಕಾರಣ ರಶ್ಮಿಕಾ ಅವರು ಕೆಲ ದಿನಗಳವರೆಗೆ ರೆಸ್ಟ್ ಮಾಡಬೇಕಾಗಿದೆ. ಈ ಹಿನ್ನೆಲೆ ಸಲ್ಮಾನ್ ಖಾನ್ 'ಸಿಖಂದರ್' ಚಿತ್ರದ ಶೂಟಿಂಗ್ ಕೂಡ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಇನ್ನು ರಶ್ಮಿಕಾ ಅವರು ಸಂಪೂರ್ಣವಾಗಿ ಗುಣಮುಖರಾದ ಮೇಲೆಯೇ ಶೂಟಿಂಗ್‌ಗೆ ಮರಳಲಿದ್ದಾರೆ ಎಂದು ವರದಿಯಾಗಿದೆ.
Advertisement