Drugs case: ರಾಗಿಣಿ ದ್ವಿವೇದಿ ಬಚಾವ್; ತುಪ್ಪದ ಹುಡುಗಿಯ ವಿರುದ್ಧದ ಕೇಸ್ ಖುಲಾಸೆ

2020 ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಭಾರೀ ಸದ್ದು ಮಾಡಿತ್ತು. ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿತ್ತು.
ragini dwivedi
ರಾಗಿಣಿ ದ್ವಿವೇದಿ
Updated on

ಬೆಂಗಳೂರು: ಡ್ರಗ್ಸ್ ಕೇಸ್ ನಲ್ಲಿ ಸಿಲುಕಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಮೇಲಿನ ಪ್ರಕರಣ ಸಾಕ್ಷ್ಯಾಧಾರ ಕೊರತೆಯಿಂದ ಖುಲಾಸೆಗೊಂಡಿದೆ. ಇದರೊಂದಿಗೆ ಅವರ ವೃತ್ತಿ ಜೀವನಕ್ಕೆ ಎದುರಾಗಿದ್ದ ದೊಡ್ಡ ಕಳಂಕ ತೊಳೆದು ಹೋದಂತಾಗಿದೆ.

2020 ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಭಾರೀ ಸದ್ದು ಮಾಡಿತ್ತು. ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿತ್ತು. ಇಬ್ಬರೂ ನಟಿಯರು ಪರಪ್ಪನ ಅಗ್ರಹಾರದಲ್ಲಿ ಕೆಲವು ದಿನ ಕಳೆದಿದ್ದರು.

ಇದಾದ ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಆದರೂ ಈ ಪ್ರಕರಣ ರಾಗಿಣಿ ವೃತ್ತಿ ಜೀವನಕ್ಕೂ ಸಾಕಷ್ಟು ಹೊಡೆತ ನೀಡಿತ್ತು. ಇದೀಗ ನಟಿಯ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಸಿಗದ ಹಿನ್ನಲೆಯಲ್ಲಿ ನಿರಪರಾಧಿ ಎಂದು ಹೈಕೋರ್ಟ್ ಖುಲಾಸೆಗೊಳಿಸಿದೆ.

ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೂ ಅವರು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಈ ಕಾರಣಕ್ಕೆ ಎನ್​ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ ಈ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎನ್ನಲಾಗಿದೆ.

ragini dwivedi
ಜಟ್ಟ ಖ್ಯಾತಿಯ ಗಿರಿರಾಜ್ ನಿರ್ದೇಶನದ ಹೊಸ ಸೈಕಲಾಜಿಕಲ್ ಥ್ರಿಲ್ಲರ್‌ನಲ್ಲಿ ನಟಿ ರಾಗಿಣಿ ದ್ವಿವೇದಿ!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com