ಮೈಸೂರು ಫಾರ್ಮ್ ಹೌಸ್ ನಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿ ಆಚರಿಸಿದ ದರ್ಶನ್! ಅಭಿಮಾನಿಗಳು ಫುಲ್ ಖುಷ್

ಮೈಸೂರಿನ ತನ್ನ ಫಾರ್ಮ್ ಹೌಸ್ ನಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Actor Darshan with wife and son
ಪತ್ನಿ ವಿಜಯಲಕ್ಷ್ಮಿ, ಮಗ ವಿನೀಸ್ ಜೊತೆಗೆ ನಟ ದರ್ಶನ್
Updated on

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿರುವ ನಟ ದರ್ಶನ್, ಜೂನ್ 2024ರಲ್ಲಿ ಬಂಧನಕ್ಕೊಳಗಾದ ನಂತರ ಇದೇ ಮೊದಲ ಬಾರಿಗೆ ಇನ್ಸ್ಟಾಗ್ರಾಮ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಮೈಸೂರಿನ ತನ್ನ ಫಾರ್ಮ್ ಹೌಸ್ ನಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಫೋಟೋಗಳಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ ಇದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಅವರಿಗೆ ಕಾನೂನು ನೆರವು ಒದಗಿಸುವಲ್ಲಿ ಇವರಿಬ್ಬರ ಪಾತ್ರ ಮಹತ್ವದಾಗಿತ್ತು.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನಾಡಿನ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯ ಕೋರಿದ್ದ ದರ್ಶನ್, ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ' ಎಂದು ಪೋಸ್ಟ್ ಮಾಡಿದ್ದರು.

ದರ್ಶನ್ ಸಾಕಿರುವ ಹಸುವಿಗೆ ವಿಶೇಷ ಪೂಜೆ ಸಲ್ಲಿಸಿ ಕಿಚ್ಚು ಹಾಯಿಸಿ ಸಂಭ್ರಮಿಸಿದ್ದಾರೆ. ದಿನಕರ್ ಅವರ ಪತ್ನಿ ಮತ್ತು ಮಕ್ಕಳು ಕೂಡ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಸಂಕ್ರಾಂತಿ ಆಚರಣೆ ವೇಳೆ ದರ್ಶನ್ ನೆಮ್ಮದಿ, ಸಂತೋಷದಿಂದ ತಮ್ಮ ಪ್ರೀತಿಪಾತ್ರರೊಂದಿಗೆ ಹಬ್ಬ ಆಚರಿಸಿರುವುದು ಕಂಡುಬಂದಿದೆ. ಈ ಫ್ಯಾಮಿಲಿ ಇಷ್ಟೇ ಖುಷಿಯಾಗಿ ಇರಲಿ ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.

Actor Darshan with wife and son
ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್'ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ದರ್ಶನ್ ಜೈಲಿಗೆ ಹೋದರೂ ಅವರ ಅಭಿಮಾನಿಗಳ ಅಭಿಮಾನ ಮಾತ್ರ ಕೊಂಚದಷ್ಟು ಕಡಿಮೆಯಾಗಿರಲಿಲ್ಲ. ಅವರ ನಡೆಯನ್ನು ಸಮರ್ಥಿಸಿಕೊಳ್ಳುತ್ತಾ, ಕಾನೂನು ಸಮರದಲ್ಲಿ ಅವರನ್ನು ಬೆಂಬಲಿಸುತ್ತಾ ಬಂದಿದ್ದಾರೆ. ದರ್ಶನ್ ಮುಂಬರುವ ಚಿತ್ರ 'Devil' ಚಿತ್ರೀಕರಣದಲ್ಲಿ ಸದ್ಯದಲ್ಲಿಯೇ ತೊಡಗಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com