ನಟ ದರ್ಶನ್ ಮನವಿಗೆ ಡೋಂಟ್ ಕೇರ್: ಗನ್ ಲೈಸೆನ್ಸ್ ರದ್ದು ಮಾಡಿದ ಪೊಲೀಸ್

ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ.
Actor Darshan
ನಟ ದರ್ಶನ್
Updated on

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ದಯಾನಂದ್‌ ತಿಳಿಸಿದ್ದಾರೆ.

ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‍ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ಕೂಡಲೇ ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೇ ಆ ವ್ಯಕ್ತಿಯ ಲೈಸೆನ್ಸ್ ರದ್ದು ಮಾಡಬಹುದಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‍ನಲ್ಲಿ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ ಕಂಡುಬರದ ಕಾರಣ ತಾತ್ಕಾಲಿಕವಾಗಿ ಅಂದರೆ ಕೇಸ್ ಮುಗಿಯುವತನಕ ಅಮಾನತ್ತಿನಲ್ಲಿಡಲು ಪೊಲೀಸರು ನಿರ್ಧರಿಸಿದ್ದಾರೆ.

ನಟ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡಲು ಈಗಾಗಲೇ ಪೊಲೀಸರು ನೋಟಿಸ್ ನೀಡಿದ್ದರು. ನೋಟಿಸ್‍ನಲ್ಲಿ, ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಗನ್ ಇರುವುದರಿಂದ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನ ಇದೆ. ಆದ್ದರಿಂದ ನಿಮ್ಮ ಲೈಸೆನ್ಸ್ ರದ್ದು ಮಾಡಬೇಕಿದೆ.

ಈ ಬಗ್ಗೆ ಒಂದು ವಾರದೊಳಗೆ ಉತ್ತರಿಸಬೇಕು. ನೋಟಿಸ್‍ಗೆ ಉತ್ತರ ನೀಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.

ಪೊಲೀಸರಿಗೆ ಪತ್ರ ಬರೆದಿದ್ದ ದರ್ಶನ್, ತಮ್ಮ ಬಂದೂಕು ಲೈಸೆನ್ಸ್ ರದ್ದು ಮಾಡದಂತೆ ಮನವಿ ಮಾಡಿದ್ದರು. ತಮಗೆ ಭದ್ರತೆಯ ಅವಶ್ಯಕತೆ ಇದ್ದು, ಆ ಕಾರಣಕ್ಕೆ ತಮಗೆ ಬಂದೂಕಿನ ಅಗತ್ಯತೆ ಇದೆಯೆಂದು ಹೇಳಿದ್ದರು. ಆದರೆ ದರ್ಶನ್ ಮನವಿಯನ್ನು ತಿರಸ್ಕರಿಸಿರುವ ಪೊಲೀಸ್ ಇಲಾಖೆ, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಗಿಯುವವರೆಗೆ ಬಂದೂಕನ್ನು ಇರಿಸಿಕೊಳ್ಳುವಂತಿಲ್ಲ ಎಂದು ಹೇಳಿ ಲೈಸೆನ್ಸ್ ಅನ್ನು ತಾತ್ಕಾಲಿಕವಾಗಿ ರದ್ದು ಮಾಡಿದೆ. ಲೈಸೆನ್ಸ್ ರದ್ದಾಗಿರುವ ಕಾರಣ, ದರ್ಶನ್ ಈ ಕೂಡಲೇ ತಮ್ಮ ಬಂದೂಕನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸರೆಂಡರ್ ಮಾಡಬೇಕಿದೆ.

Actor Darshan
ಆತ್ಮರಕ್ಷಣೆಗಾಗಿ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ: ಪೊಲೀಸರಿಗೆ ನಟ ದರ್ಶನ್ ಮನವಿ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com