'ಟಾಕ್ಸಿಕ್' ಚಿತ್ರದಲ್ಲಿ ಯಶ್‌ಗೆ ಜೋಡಿಯಾಗಿ ನಟಿ ನಯನತಾರಾ ಫಿಕ್ಸ್; ನಟ ಅಕ್ಷಯ್ ಒಬೆರಾಯ್ ಹೇಳಿದ್ದೇನು?

ಡಿಜಿಟಲ್ ಕಾಮೆಂಟರಿಗೆ ನೀಡಿದ ಸಂದರ್ಶನದಲ್ಲಿ ಅಕ್ಷಯ್, ನಿರ್ದೇಶಕಿ ಗೀತು ಮೋಹನ್‌ದಾಸ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಯಶ್ - ನಯನತಾರಾ
ಯಶ್ - ನಯನತಾರಾ
Updated on

ಮಲಯಾಳಂನ ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಲೇಡಿ ಸೂಪರ್‌ಸ್ಟಾರ್ ನಯನತಾರಾ ನಟಿಸಲಿದ್ದಾರೆ. ಚಿತ್ರದ ಸಂಪೂರ್ಣ ಪಾತ್ರವರ್ಗವನ್ನು ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲವಾದರೂ, ಬಾಲಿವುಡ್ ನಟ ಅಕ್ಷಯ್ ಒಬೆರಾಯ್ ಚಿತ್ರದಲ್ಲಿ ನಯನತಾರಾ ಇದ್ದಾರೆ ಎಂಬುದನ್ನು ಖಚಿತಪಡಿಸಿದ್ದಾರೆ.

ನಯನತಾರಾ ಅವರು ಸದ್ಯ ರಾಕಿಂಗ್ ಸ್ಟಾರ್ ಯಶ್ ಅವರ ಜೊತೆಗೆ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿರುವ ಅವರು ಚಿತ್ರದಲ್ಲಿ ಮತ್ತೆ ಯಾರೆಲ್ಲಾ ಇರಲಿದ್ದಾರೆ ಎಂಬುದರ ಕುರಿತು ವಿವರಗಳನ್ನು ಬಹಿರಂಗಪಡಿಸಿಲ್ಲ.

ಡಿಜಿಟಲ್ ಕಾಮೆಂಟರಿಗೆ ನೀಡಿದ ಸಂದರ್ಶನದಲ್ಲಿ ಅಕ್ಷಯ್, ನಿರ್ದೇಶಕಿ ಗೀತು ಮೋಹನ್‌ದಾಸ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಮತ್ತು ಈ ಸಿನಿಮಾ ಹೇಗೆ ಕಾಣುತ್ತದೆ ಎಂಬುದನ್ನು ನೋಡಲು ತುಂಬಾ ಉತ್ಸುಕನಾಗಿದ್ದೇನೆ ಎಂದಿದ್ದಾರೆ.

ಟಾಕ್ಸಿಕ್‌ ಚಿತ್ರದಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಬದಲಿಗೆ ನಯನತಾರಾ ನಟಿಸಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ಬಳಿಕ ಚಿತ್ರದಲ್ಲಿ ಕರೀನಾ ಅವರು ನಯನತಾರಾ ಅವರ ಅಕ್ಕನ ಪಾತ್ರದಲ್ಲಿ ನಟಿಸಬಹುದು ಎಂದು ಊಹಿಸಲಾಗಿತ್ತು. ಆದರೆ, ಈ ವರದಿಗಳ ಬಗ್ಗೆ ಸದ್ಯಕ್ಕೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಯಶ್ - ನಯನತಾರಾ
ಯಶ್ 'ಟಾಕ್ಸಿಕ್' ಚಿತ್ರದಲ್ಲಿ ಕರೀನಾ ಕಪೂರ್ ಜಾಗಕ್ಕೆ ನಯನತಾರಾ ಆಯ್ಕೆ!

ಟಾಕ್ಸಿಕ್ ಚಿತ್ರವು ಗೋವಾದಲ್ಲಿ ಡ್ರಗ್ಸ್ ವ್ಯಾಪಾರದ ಸುತ್ತ ಕೇಂದ್ರೀಕೃತವಾದ ಆ್ಯಕ್ಷನ್-ಪ್ಯಾಕ್ಡ್ ಥ್ರಿಲ್ಲರ್ ಆಗಿರುತ್ತದೆ. ಯಶ್ ಹುಟ್ಟುಹಬ್ಬದಂದು ಬಿಡುಗಡೆಯಾದ ಇತ್ತೀಚಿನ ಟೀಸರ್ ಅತಿಹೆಚ್ಚು ವೀಕ್ಷಣೆ ಕಂಡು ಈಗಾಗಲೇ ದಾಖಲೆ ನಿರ್ಮಿಸಿದೆ. ಚಿತ್ರವನ್ನು ಏಪ್ರಿಲ್ 10 ರಂದು ಬಿಡುಗಡೆ ಮಾಡಲು ಯೋಜಿಸಲಾಗಿದೆ. ಆದರೂ, ಯೋಜನೆಯು ವಿಳಂಬವಾಗುವ ಸಾಧ್ಯತೆಯಿದೆ ಎಂಬ ಊಹಾಪೋಹಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com