ಪವಿತ್ರಾ ಗೌಡ
ಸಿನಿಮಾ ಸುದ್ದಿ
Maha Kumbh: ಮೌನಿ ಅಮಾವಾಸ್ಯೆಯಂದು ಪವಿತ್ರಾ ಗೌಡ ಶಾಹಿ ಸ್ನಾನ!
‘ಮೌನಿ ಅಮಾವಾಸ್ಯೆಯಂದು ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೇ ಧನ್ಯಳು, ನಾನು ಎಲ್ಲಾ ನಕಾರಾತ್ಮಕ ಶಕ್ತಿಯಿಂದ ಮುಕ್ತಳಾಗಿದ್ದೇನೆ ಎಂದು ನಂಬಿದ್ದೇನೆ ಹರಹರ ಮಹಾದೇವ' ಎಂದು ಬರೆದುಕೊಂಡಿದ್ದಾರೆ.
ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕೋಟ್ಯಂತರ ಜನರು ಶಾಹಿ ಸ್ನಾನ ಮಾಡುತ್ತಿದ್ದು ಅನೇಕ ಸೆಲೆಬ್ರಿಟಿಗಳು ಕೂಡ ಭಾಗಿಯಾಗುತ್ತಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸೆರೆವಾಸ ಅನುಭವಿಸಿ ಜಾಮೀನು ಮೇಲೆ ಹೊರಬಂದಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಕೂಡ ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಶಾಹಿ ಸ್ನಾನ ಕೂಡ ಮಾಡಿದ್ದಾರೆ, ಈ ವಿಡಿಯೊವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
‘ಮೌನಿ ಅಮಾವಾಸ್ಯೆಯಂದು ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೇ ಧನ್ಯಳು’. ನಾನು ಎಲ್ಲಾ ನಕಾರಾತ್ಮಕ ಶಕ್ತಿಯಿಂದ ಮುಕ್ತಳಾಗಿದ್ದೇನೆ ಎಂದು ನಂಬಿದ್ದೇನೆ. ಹರಹರ ಮಹಾದೇವ ಎಂದು ಬರೆದುಕೊಂಡಿದ್ದಾರೆ.

