
ಬೆಂಗಳೂರು: ಆಷಾಢ ಮಾಸದ(Ashada Masa) ಎರಡನೇ ಶುಕ್ರವಾರ ದಿನವಾದ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಪತ್ನಿ ಮತ್ತು ಕುಟುಂಬಸ್ಥರ ಜೊತೆ ಬೆಳಗ್ಗೆಯೇ ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು.
ದರ್ಶನ್ ನೋಡಲು ಮುಗಿಬಿದ್ದ ಜನ
ನಟ ದರ್ಶನ್ ಕಾರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಕಾರಿನ ಸುತ್ತ ಸೇರಿದ್ದರು, ಕಾರು ಇಳಿದ ದರ್ಶನ್ ಕಂಡು ಡಿಬಾಸ್, ಡಿಬಾಸ್ ಎಂದು ಕೂಗಿದ್ದಾರೆ. ಮೊಬೈಲ್ ಹಿಡಿದು ವಿಡಿಯೋ ಮಾಡಲು ಜನರು ಪರದಾಡಿದ್ದಾರೆ. ಅಭಿಮಾನಿಗಳಿಗೆ ಕೈ ಮುಗಿದ ದರ್ಶನ್ ದೇವಸ್ಥಾನದ ಒಳಗೆ ಹೋಗಿ ಪೂಜೆ ಮಾಡಿಸಿದರು. ಈ ವೇಳೆ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಕುಟುಂಬ ಸಾಥ್ ನೀಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಜಾಮೀನಿನ ಮೇಲಿರುವ ದರ್ಶನ್‌ಗೆ, ಇತ್ತೀಚೆಗೆ ಸಿನಿಮಾ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಹೆಚ್ ಕೋರ್ಟ್ ಅನುಮತಿ ನೀಡಿತ್ತು. ಜೂನ್ 1ರಿಂದ 25ರವರೆಗೆ ಡೆವಿಲ್ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು ಅನುಮತಿ ನೀಡಲಾಗಿತ್ತು.
ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ
2ನೇ ಆಷಾಢದ ಶುಕ್ರವಾರದ ಹಿನ್ನೆಲೆ ದೇವಿಗೆ ಮುಂಜಾನೆ 3:30ಕ್ಕೆ ವಿವಿಧ ಅಭಿಷೇಕಗಳನ್ನು ದೇವಿಗೆ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಇಂದು ದೇವಸ್ಥಾನದಲ್ಲಿ ತೋತಾಪುರಿ ಮೇಕೆಜೋಳ ಹಾಗೂ ಕಮಲದ ಹೂವಿನ ಅಲಂಕಾರ ಮಾಡಲಾಗಿದೆ. ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ.
Advertisement