
ಬೆಂಗಳೂರು: ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು (ಜುಲೈ 7) ಸೋಮವಾರ ಹುಟ್ಟುಹಬ್ಬದ ಸಂಭ್ರವನ್ನಾಚರಿಸಿಕೊಳ್ಳುತ್ತಿದ್ದು, ನಟನ ಹುಟ್ಟುಹಬ್ಬದ ಪ್ರಯುಕ್ತ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಬಿಗ್ ಅಪ್ಡೇಟ್ ವೊಂದನ್ನು ನೀಡಿದೆ.
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ 'ಕಾಂತಾರ ಚಾಪ್ಟರ್ 1' ಚಿತ್ರದ ರಿಲೀಸ್ ಡೇಟ್ ಘೋಷಣೆ ಆಗಿದೆ.
2022ರಲ್ಲಿ ತೆರೆಕಂಡು ಹೊಸ ದಾಖಲೆ ಬರೆದಿದ್ದ 'ಕಾಂತಾರ' ಸಿನಿಮಾದ ಪ್ರೀಕ್ವೆಲ್ ಸಿದ್ಧಗೊಳ್ಳುತ್ತಿದ್ದು. ಪ್ರೀಕ್ವೆಲ್ ವರ್ಷನ್ 'ಕಾಂತಾರ ಚಾಪ್ಟರ್ 1' ಚಿತ್ರ ಇದೇ ವರ್ಷ ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಗೆ ಬರುತ್ತಿದೆ. ರಿಷಬ್ ಶೆಟ್ಟಿ ಜನ್ಮದಿನದ ಪ್ರಯುಕ್ತ ಈ ವಿಚಾರವನ್ನು ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಅಧಿಕೃತವಾಗಿ ಹಂಚಿಕೊಂಡಿದೆ.
ಈ ನಜುವೆ ಹುಟ್ಟುಹಬ್ಬದ ದಿನವೇ ರಿಷಬ್‌ಗೆ ಭರ್ಜರಿ ಗಿಫ್ಟ್ ಕೊಟ್ಟಿರುವ ಚಿತ್ರತಂಡ ʻದಂತಕಥೆಯ ಮುನ್ನುಡಿ… ಆ ನುಡಿಗೊಂದು ಪರಿಚಯ… ಮನದಾಳದ ಕಥೆಗೆ ಮತ್ತೊಮ್ಮೆ ಸ್ವಾಗತ.ʼ ಎನ್ನುವ ಸಾಲಿನೊಂದಿಗೆ ವಿಶೇಷ ಪೋಸ್ಟರ್‌ವೊಂದನ್ನು ಹಂಚಿಕೊಂಡಿದೆ.
ಪೋಸ್ಟರ್‌ನಲ್ಲಿ ರಿಷಬ್ ಶೆಟ್ಟಿ ಕೈಯಲ್ಲಿ ಕೊಡಲಿ ಹಾಗೂ ಗುರಾಣಿ ಹಿಡಿದಿದ್ದಾರೆ. ಗುರಾಣಿಗೆ ಬಾಣಗಳು ಚುಚ್ಚಿವೆ. ಹಿಂಭಾಗದಲ್ಲಿ ಬೆಂಕಿ ಇದೆ. ರಿಷಬ್ ಶೆಟ್ಟಿ ಮುಖದಲ್ಲಿ ಆಕ್ರೋಶದ ಜ್ವಾಲೆ ಎದ್ದು ಕಾಣುತ್ತಿದೆ. ರಕ್ತಸಿಕ್ತ ಅವತಾರದಲ್ಲಿ ಘರ್ಜಿಸುತ್ತಿರುವ ಅವತಾರದಲ್ಲಿ ಡಿವೈನ್‌ಸ್ಟಾರ್ ಕಂಡು ಬಂದಿದ್ದಾರೆ.
Advertisement