
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರೂಪಕಿ ಅನುಶ್ರೀ (Anchor Anushree) ವಿವಾಹದ ಕುರಿತಂತೆ ಹಬ್ಬಿದ್ದ ಎಲ್ಲ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದಿದ್ದು ಶೀಘ್ರದಲ್ಲಿಯೇ ಆ್ಯಂಕರ್ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಅವರ ವಿವಾಹದ ಕುರಿತ ಸುದ್ದಿ ಇದೀಗ ನಿಜವಾಗುತ್ತಿದ್ದು, ಆಗಸ್ಟ್ ತಿಂಗಳಲ್ಲಿ ಅವರ ವಿವಾಹ ನಡೆಯಲಿದೆ ಎಂದು ವರದಿಗಳಿವೆ.
ಬೆಂಗಳೂರಿನ ಉದ್ಯಮಿಯೊಂದಿಗೆ ಅವರ ವಿವಾಹ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಅನುಶ್ರೀ ಅವರು ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ.
ಹುಡುಗ ಯಾರು?
ಆ್ಯಂಕರ್ ಅನುಶ್ರೀ ಬೆಂಗಳೂರು ಮೂಲದ ಉದ್ಯಮಿ ರೋಷನ್ ಜೊತೆ ವಿವಾಹವಾಗುತ್ತಿದ್ದಾರೆ ಎನ್ನಲಾಗಿದೆ. ರೋಷನ್ ಮೂಲತ- ಕೊಡಗಿನವರಾಗಿದ್ದು, ಐಟಿ ವೃತ್ತಿಪರರು ಎಂದು ತಿಳಿದುಬಂದಿದೆ. ಈಗಾಗಲೇ ಎರಡೂ ಕುಟುಂಬಗಳು ಮದುವೆಗೆ ಸಕಲ ಸಿದ್ಧತೆಗಳನ್ನು ಮಾಡುತ್ತಿವೆ.
ಇದು ಪಕ್ಕಾ ಅರೇಂಜ್ ಮ್ಯಾರೇಜ್ ಆಗಿದ್ದು, ಕುಟುಂಬದವರು ನೋಡಿರುವ ಹುಡುಗನನ್ನು ಅನುಶ್ರೀ ವರಿಸುತ್ತಿದ್ದಾರೆ ಎನ್ನಲಾಗಿದೆ. ರೋಷನ್ ಅನುಶ್ರೀ ಕುಟುಂಬದ ಫ್ಯಾಮಿಲಿ ಫ್ರೆಂಡ್ ಎಂದು ಹೇಳಲಾಗಿದೆ.
ಯಾವಾಗ? ಎಲ್ಲಿ ಮದುವೆ?
ಅನುಶ್ರೀ ಮತ್ತು ರೋಷನ್ ಮದುವೆ ಮುಂಬರುವ ಆಗಸ್ಟ್ ತಿಂಗಳಲ್ಲಿ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ಆಗಸ್ಟ್ 28ರಂದು ಬೆಂಗಳೂರಿನಲ್ಲಿಯೇ ಮದುವೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಇಷ್ಟೆಲ್ಲಾ ಸುದ್ದಿಗಳ ನಡುವೆಯೂ ಈ ಬಗ್ಗೆ ಅನುಶ್ರೀ ಅಥವಾ ಅವರ ಕುಟುಂಬದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಮುಂದಿನ ದಿನಗಳಲ್ಲಿ ಅವರು ಈ ಬಗ್ಗೆ ಮಾಹಿತಿ ರಿವೀಲ್ ಮಾಡೋ ಸಾಧ್ಯತೆ ಇದೆ.
Advertisement