'ಮಾದೇವ' ಯಶಸ್ಸಿನ ಬಳಿಕ 'ಬಲರಾಮನ ದಿನಗಳು' ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿದ ವಿನೋದ್ ಪ್ರಭಾಕರ್!

ಪದ್ಮಾವತಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಪದ್ಮಾವತಿ ಜಯರಾಮ್ ಮತ್ತು ಶ್ರೇಯಸ್ ಬಲರಾಮನ ದಿನಗಳು ಚಿತ್ರವನ್ನು ನಿರ್ಮಿಸಿದ್ದು, ಕನ್ನಡ ಸಿನಿಮಾ ನಿರ್ಮಾಣಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
Balaramana Dinagalu poster - and the cast of the film
ಬಲರಾಮನ ದಿನಗಳು ಚಿತ್ರದ ಪೋಸ್ಟರ್ - ಚಿತ್ರತಂಡ
Updated on

ಇತ್ತೀಚೆಗೆ ಬಾಕ್ಸ್ ಆಫೀಸ್‌ನಲ್ಲಿ 50 ದಿನಗಳ ಭರ್ಜರಿ ಪ್ರದರ್ಶನ ಕಂಡ 'ಮಾದೇವ' ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ನಟ ವಿನೋದ್ ಪ್ರಭಾಕರ್, ಇದೀಗ ತಮ್ಮ ಮುಂದಿನ ಯೋಜನೆ 'ಬಲರಾಮನ ದಿನಗಳು' ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

'ಆ ದಿನಗಳು' ಚಿತ್ರದ ಕೆಎಂ ಚೈತನ್ಯ ನಿರ್ದೇಶನದ ಈ ಹೊಸ ಚಿತ್ರವು 1980ರ ದಶಕದಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಸಕಲೇಶಪುರದಂತಹ ಸ್ಥಳಗಳಲ್ಲಿ 80 ದಿನಗಳ ಚಿತ್ರೀಕರಣ ಪೂರ್ಣಗೊಂಡಿದೆ. ಪೋಸ್ಟ್-ಪ್ರೊಡಕ್ಷನ್ ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ತೀವ್ರ ನಿರೀಕ್ಷೆ ಮೂಡಿಸಿದೆ.

ಪದ್ಮಾವತಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಪದ್ಮಾವತಿ ಜಯರಾಮ್ ಮತ್ತು ಶ್ರೇಯಸ್ ಬಲರಾಮನ ದಿನಗಳು ಚಿತ್ರವನ್ನು ನಿರ್ಮಿಸಿದ್ದು, ಕನ್ನಡ ಸಿನಿಮಾ ನಿರ್ಮಾಣಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರಿಗೆ ಪ್ರಿಯಾ ಆನಂದ್ ಜೋಡಿಯಾಗಿದ್ದಾರೆ. ಅತುಲ್ ಕುಲಕರ್ಣಿ ಮತ್ತು ಆಶಿಶ್ ವಿದ್ಯಾರ್ಥಿ, ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮತ್ತು ಕನ್ನಡ ಮತ್ತು ಇತರ ಚಲನಚಿತ್ರೋದ್ಯಮಗಳ ಪರಿಚಿತ ಮುಖಗಳು ಚಿತ್ರದಲ್ಲಿ ನಟಿಸಿದ್ದಾರೆ.

Balaramana Dinagalu poster - and the cast of the film
ಕೆಎಂ ಚೈತನ್ಯ ನಿರ್ದೇಶನದ 'ಬಲರಾಮನ ದಿನಗಳು' ಚಿತ್ರಕ್ಕೆ ಪ್ರಿಯಾ ಆನಂದ್ ಎಂಟ್ರಿ; ವಿನೋದ್ ಪ್ರಭಾಕರ್‌ಗೆ ಜೋಡಿ

ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸಿದ್ದು, 'ಬಾಲರಾಮನ ದಿನಗಳು' ಚಿತ್ರದ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ವೇಣು ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com