ರಮ್ಯಾ ವಿರುದ್ಧ ಕಾನೂನು ಸಮರಕ್ಕಿಳಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ: ದೂರು ಕೊಡಲು ಮುಂದು!

ಕೋರ್ಟ್ ಅಲ್ಲಿ ಇನ್ನೂ ಪ್ರಕರಣ ಇತ್ಯರ್ಥ ಆಗಿಲ್ಲ. ಆಗಲೇ ದರ್ಶನ್ ಅನ್ನು ದೋಷಿ ಎಂದು ಹೇಳುತ್ತಿದ್ದಾರೆ. ಕೋರ್ಟ್ ಅಲ್ಲಿ ಇರುವ ಪ್ರಕರಣಕ್ಕೆ ರಮ್ಯಾ ಕಾಮೆಂಟ್ ಮಾಡಿದ್ದು ಸರಿಯಲ್ಲ.
Ramya, darshan and vijayalaxmi
ರಮ್ಯಾ, ದರ್ಶನ್ ಮತ್ತು ವಿಜಯಲಕ್ಷ್ಮಿ
Updated on

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಗೆ ನ್ಯಾಯ ಸಿಗಲಿದೆ ಎಂಬ ನಟಿ ರಮ್ಯಾ ಪೋಸ್ಟ್‌ಗೆ ದರ್ಶನ್ ಅಭಿಮಾನಿಗಳು ಅಶ್ಲೀಲವಾಗಿ ಮೆಸೇಜ್, ಕಾಮೆಂಟ್ಸ್ ಮಾಡುತ್ತಿರುವ ಸಂಬಂಧ ಸೈಬರ್ ಪೊಲೀಸರಿಗೆ ದೂರು ನೀಡುವುದಾಗಿ ರಮ್ಯಾ ಹೇಳಿದ ಬೆನ್ನಲ್ಲೇ ಪತಿ ಪರವಾಗಿ ವಿಜಯಲಕ್ಷ್ಮಿ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ.

ಕೋರ್ಟ್ ಅಲ್ಲಿ ಇನ್ನೂ ಪ್ರಕರಣ ಇತ್ಯರ್ಥ ಆಗಿಲ್ಲ. ಆಗಲೇ ದರ್ಶನ್ ಅನ್ನು ದೋಷಿ ಎಂದು ಹೇಳುತ್ತಿದ್ದಾರೆ. ಕೋರ್ಟ್ ಅಲ್ಲಿ ಇರುವ ಪ್ರಕರಣಕ್ಕೆ ರಮ್ಯಾ ಕಾಮೆಂಟ್ ಮಾಡಿದ್ದು ಸರಿಯಲ್ಲ. ರಮ್ಯಾ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ರಮ್ಯಾ ದರ್ಶನ್ ವಿರುದ್ಧ ಪೋಸ್ಟ್ ಹಾಕಿ ರೇಣುಕಾಸ್ವಾಮಿಗೆ ನ್ಯಾಯ ಸಿಗಲಿದೆ ಎಂದು ಬರೆದುಕೊಂಡಿದ್ದರು. ಈ ಹಿನ್ನೆಲೆ ಇಂದು ಮಧ್ಯಾಹ್ನದ ವೇಳೆಗೆ ವಿಜಯಲಕ್ಷ್ಮಿ ನಟಿ ರಮ್ಯಾ ವಿರುದ್ಧ ದೂರು ನೀಡಲಿದ್ದಾರೆ.

Ramya, darshan and vijayalaxmi
ದರ್ಶನ್ ಅಭಿಮಾನಿಗಳಿಂದ ಟ್ರೋಲ್: ಡಿ ಬಾಸ್ ಅಭಿಮಾನಿಗಳಿಗೆ ನಟಿ ರಮ್ಯಾ ಖಡಕ್ ತಿರುಗೇಟು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com