
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದ ಕುರಿತು ಟ್ವೀಟ್ ಮಾಡಿ ನಟ ದರ್ಶನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿರುವ ನಟಿ ರಮ್ಯಾ ಬೆನ್ನಗೆ ನಟ ಪ್ರಥಮ್ ನಿಂತಿದ್ದು, 'ಕನ್ನಡ ಚಿತ್ರರಂಗವನ್ನು ಭಯದಿಂದ ಮುಕ್ತಗೊಳಿಸೋಣ' ಎಂದು ಟ್ವೀಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಡೆಯನ್ನು ನಟಿ ರಮ್ಯಾ ಸ್ವಾಗತಿಸಿದ್ದು, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ದೊರೆಯಲಿದೆ ಎಂದು ಪೋಸ್ಟ್ ಮಾಡಿದ್ದರು.
ಈ ಪೋಸ್ಟ್ ಗೆ ನಟ ದರ್ಶನ್ ಅಭಿಮಾನಿಗಳು ಗರಂ ಆಗಿ ರಮ್ಯಾ ವಿರುದ್ಧ ಅಶ್ಲೀಲ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಇದನ್ನು ರಮ್ಯಾ ಓಪನ್ ಆಗಿ ಹಂಚಿಕೊಂಡಿದ್ದಾರೆ. ಅವರು ಸೈಬರ್ ಠಾಣೆಗೆ ದೂರು ನೀಡುವುದಾಗಿಯೂ ಹೇಳಿದ್ದಾರೆ.
ಇದೀಗ ಈ ಪ್ರಕರಣದಲ್ಲಿ ನಟ ಪ್ರಥಮ್ ಕೂಡ ನಟಿ ರಮ್ಯಾ ಬೆನ್ನಿಗೆ ನಿಂತಿದ್ದು, ಎಲ್ಲರೂ ನಟಿ ರಮ್ಯ ಪರ ನಿಲ್ಲೋಣ ಎಂದು ಪೋಸ್ಟ್ ಮಾಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಥಮ್, 'I stand with @divyaspandana madam dignity! ಎಲ್ಲರೂ ನಟಿ ರಮ್ಯ ಪರ ನಿಲ್ಲೋಣ!.. ಈಗಲೂ ನಾವು ರಮ್ಯರವರ ಆತ್ಮಗೌರವದ ಪರ ನಿಲ್ಲದೇ ಹೋದರೆ ನಾವು ಕಲಾವಿದರಾಗೋಕೆ ನಾಚಿಕೆಯಾಗಬೇಕು! ಕನ್ನಡ ಚಿತ್ರರಂಗವನ್ನ ಭಯದಿಂದ ಮುಕ್ತಗೊಳಿಸೋಣ! ಇಷ್ಟೆಲ್ಲಾ ಆದ್ರೂ ಜಾಣಕಿವುಡರಾಗಿರೋ ಪುಣ್ಯಾತ್ಮ ಕಲಾವಿದರಿಗೆ ದೇವರು ನೂರ್ಕಾಲ ಆಯಸ್ಸು ನೀಡಲೆಂದು ಪ್ರಾರ್ಥನೆ ಎಂದು ಟ್ವೀಟ್ ಮಾಡಿದ್ದಾರೆ.
ಇಷ್ಟಕ್ಕೂ ಅಗಿದ್ದೇನು?
ಸುಪ್ರೀಂಕೋರ್ಟ್ನಲ್ಲಿ ನಟ ದರ್ಶನ್ ಅರ್ಜಿ ರದ್ದು ಮಾಡಿ ಎಂದು ರಾಜ್ಯ ಸರ್ಕಾರದ ಅರ್ಜಿ ವಿಚಾರಣೆ ನಡೆದಿದ್ದು, ಆದೇಶ ಕಾಯ್ದಿರಿಸಲಾಗಿದೆ. ದರ್ಶನ್ ಜಾಮೀನು ರದ್ದಾಗುತ್ತದೆಯೇ ಅಥವಾ ಇಲ್ಲವೇ ಎಂಬ ಪ್ರಶ್ನೆ ಮೂಡಿದೆ. ಸುಪ್ರೀಂಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆವಾಗ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ರಮ್ಯಾ ಹೇಳಿದ್ದರು.
ಇದರಿಂದ ದರ್ಶನ್ ಫ್ಯಾನ್ಸ್ ಸಿಟ್ಟಾಗಿದ್ದರು. ಅವರು ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ. ಇದನ್ನು ರಮ್ಯಾ ಓಪನ್ ಆಗಿ ಹಂಚಿಕೊಂಡಿದ್ದಾರೆ. ಅವರು ಸೈಬರ್ ಠಾಣೆಗೆ ದೂರು ನೀಡುವುದಾಗಿಯೂ ಹೇಳಿದ್ದಾರೆ.
Advertisement