
ಬೆಂಗಳೂರು: ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಈ ನಡುವೆ ನಟಿ ರಕ್ಷಿತಾ ಮಾಡಿರುವ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಟಿ ರಕ್ಷಿತಾ ಅವರ ಇನ್ಸ್ಟಾಗ್ರಾಂ ಸ್ಟೇಟಸ್ ಹಲವರ ಗಮನ ಸೆಳೆಯುತ್ತಿದ್ದು, ರಕ್ಷತಾ ಅವರು ಸಭ್ಯತೆಯ ಕುರಿತು ಪಾಠ ಮಾಡಿರುವುದು ಕಂಡು ಬಂದಿದೆ. ಆದರೆ, ಈ ಪಾಠ ದರ್ಶನ್ ಅಭಿಮಾನಿಗಳಿಗೆ ಮಾಡಿದ್ದಾರೋ ಆಥವಾ ರಮ್ಯಾ ಅವರಿಗೆ ಟಾಂಗ್ ಕೊಟ್ಟಿದ್ದಾರೋ ಎಂಬುದು ಸ್ಪಷ್ಟವಾಗಿಲ್ಲ.
‘ನಿಮಗೆ ವ್ಯಕ್ತಿಗಳ ಮಾನಸಿಕ ಆರೋಗ್ಯ ನೋಡಲು ಸಾಧ್ಯವಿಲ್ಲ. ಯಾವಾಗಲೂ ದಯೆ ಇರಲಿ’ ಎಂಬ ಪೋಸ್ಟ್ ಹಂಚಿಕೊಂಡಿದ್ದಾರೆ.
ಮತ್ತೊಂದು ಪೋಸ್ಟ್ ನಲ್ಲಿ ನಾನು ನಿಜವಾಗಿಯೂ ಏನು ವೈರಲ್ ಆಗಬೇಕೆಂದು ಬಯಸುತ್ತೇನೆ ಎಂದು ನಿಮಗೆ ತಿಳಿದಿದೆಯೇ? ಮೂಲಭೂತ ಮಾನವೀಯ ಸಭ್ಯತೆ’ ಎಂದು ಹೇಳಿದ್ದಾರೆ.
ಸದ್ಯ ಸ್ಯಾಂಡಲ್ ವುಡ್ ನಲ್ಲಿ ರಮ್ಯಾ ಮತ್ತು ದರ್ಶನ್ ಫ್ಯಾನ್ಸ್ ವಾರ್ ಸುದ್ದಿ ಚರ್ಚೆಯಾಗುತ್ತಿದ್ದು, ರಕ್ಷಿತಾ ಅವರು ಮಾಡಿರುವ ಪೋಸ್ಟ್ ಕೂಡ ಚರ್ಚೆಗೆ ಕಾರಣವಾಗಿದೆ.
ರಕ್ಷಿತಾ ಮತ್ತು ದರ್ಶನ್ ಉತ್ತಮ ಸ್ನೇಹಿತರಾಗಿದ್ದು, ಹೀಗಾಗಿ ದರ್ಶನ್ಗೆ ಬೆಂಬಲ ನೀಡಿ ರಕ್ಷಿತಾ ಪೋಸ್ಟ್ ಮಾಡಿದರೇ ಅಥವಾ ರಮ್ಯಾ ಪರವಾಗಿ ನಿಂತು ಅಭಿಮಾನಿಗಳಿಗೆ ಸಭ್ಯತೆಯ ಪಾಠ ಮಾಡಿದರೇ ಎಂಬುದು ಸ್ಪಷ್ಟವಾಗಿಲ್ಲ.
ಈ ಹಿಂದೆ ನಟಿ ರಮ್ಯಾ ಅವರು, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆಂದು ಪೋಸ್ಟ್ ಶೇರ್ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ನಟ ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಅವರಿಗೆ ಕೆಟ್ಟದಾಗಿ ಕಾಮೆಂಟ್ಸ್ ಮಾಡಿದ್ದಾರೆ.
ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಬಗ್ಗೆ ಖುದ್ದು ರಮ್ಯಾ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಫೋಟೋಸ್ ಶೇರ್ ಮಾಡಿಕೊಂಡಿದ್ದರು. ಇದೀಗ ದರ್ಶನ್ ಫ್ಯಾನ್ಸ್ ವಿರುದ್ಧ ನಟಿ ರಮ್ಯಾ ಕಾನೂನಾತ್ಮಕವಾಗಿ ಪಾಠ ಕಲಿಸಲು ತೀರ್ಮಾನಿಸಿದ್ದಾರೆ. ಅಶ್ಲೀಲವಾಗಿ ನಿಂದಿಸುತ್ತಿರೋರ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಲು ನಟಿ ನಿರ್ಧರಿಸಿದ್ದಾರೆ.
Advertisement