
ನಟಿ ರಮ್ಯಾಗೆ ನಟ ದರ್ಶನ್ ಅಭಿಮಾನಿಗಳು ಮಾಡಿದ ಅಶ್ಲೀಲ ಸಂದೇಶಗಳ ವಿರುದ್ಧ ಕನ್ನಡ ಚಿತ್ರರಂಗದ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವರಾಜ್ಕುಮಾರ್, ಯುವರಾಜಕುಮಾರ್ ವಿನಯ್ ರಾಜ್ಕುಮಾರ್ ಮತ್ತು ಪ್ರಥಮ್ ಮುಂತಾದವರು ರಮ್ಯಾಗೆ ಬೆಂಬಲ ನೀಡಿದ್ದಾರೆ. ಆದರೆ ಡಾ. ರಾಜಕುಮಾರ್ ಕುಟುಂಬದ ಸದಸ್ಯರ ಮಾತಿಗೆ ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ತಿರುಗೇಟು ನೀಡಿದ್ದಾರೆ.
ಮಾಧ್ಯಮಗಳಲ್ಲಿ ಮಹಿಳೆಯರನ್ನು ಅವಮಾನಿಸುವುದರ ವಿರುದ್ಧ ಮಾತನಾಡುವುದು ನೋಡುವಾಗ, ತಮ್ಮ ಕುಟುಂಬದಲ್ಲೇ ಇದೆಲ್ಲ ನಡೆಯುವಾಗ ಮಾತಾಡದೇ ಸುಮ್ಮನೇ ಇದ್ರಲ್ಲ, ಆವಾಗ ನಿದ್ರೆ ಮಾಡ್ತಾ ಇದ್ರಾ ಎಲ್ಲ? ಎಂದು ಶ್ರೀದೇವಿ ಭೈರಪ್ಪ ಅವರು ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದು ಇದರ ಜೊತೆ 'ಬೂಟಾಟಿಕೆ ವ್ಯಕ್ತಿಗಳು' ಮತ್ತು 'ಡ್ರಾಮಾ' ಎಂಬ ಹ್ಯಾಶ್ ಟ್ಯಾಗ್ಗಳನ್ನು ಬಳಸಿದ್ದಾರೆ.
ನಟ ದರ್ಶನ್ ಅಭಿಮಾನಿಗಳ ದುರ್ವರ್ತನೆ ವಿರುದ್ಧ ನಟಿ ರಮ್ಯಾ ಸಾರಿರುವ ಸಮರಕ್ಕೆ ದೊಡ್ಮನೆ ಬೆಂಬಲ ನೀಡಿದ್ದು ನಟ ಶಿವರಾಜ್ ಕುಮಾರ್ ದಂಪತಿ ರಮ್ಯಾ ಪರ ಬ್ಯಾಟ್ ಬೀಸಿದ್ದಾರೆ. ಹೌದು.. ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರವಾಗಿ ನಟ ದರ್ಶನ್ ಅಭಿಮಾನಿಗಳು ನಟಿ ರಮ್ಯಾ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿ ಟೀಕೆ ಮಾಡುತ್ತಿದ್ದು, ಇದರ ವಿರುದ್ಧ ನಟಿ ಬಹಿರಂಗವಾಗಿಯೇ ಸಮರ ಸಾರಿದ್ದರು. ಈ ಸಂಬಂಧ ಪೊಲೀಸ್ ದೂರು ನೀಡಿರುವ ನಟಿ ರಮ್ಯಾಗೆ ಇದೀಗ ಎಲ್ಲಡೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಈ ಕುರಿತು ಟ್ವೀಟ್ ಮಾಡಿರುವ ಶಿವಣ್ಣ, 'ರಮ್ಯಾ, ನಿಮ್ಮ ನಿಲವು ಸರಿಯಿದೆ, ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ' ಎಂದಿದ್ದಾರೆ. ಮುಂದುವರೆದು, ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಹೀಗೆ ಮಾತನಾಡುವುದು ಸರಿಯಲ್ಲ. ಅದನ್ನು ನಾವು ಸಹಿಸಬಾರದು ಎಂದು ಎಕ್ಸ್ ನಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
Advertisement