
ತಿರುವನಂತಪುರಂ: ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಮಲಯಾಳಂ ಖ್ಯಾತ ಮಲಯಾಳಂ ರ‍್ಯಾಪರ್ ಹಿರಂದಾಸ್ ವಿರುದ್ಧ ಪ್ರಕರಣ ದಾಖಲಾಗಿದೆ.
ಕೇರಳದ ತ್ರಿಕ್ಕಾಕರ ಪೊಲೀಸ್ ಠಾಯಲಿ ರ‍್ಯಾಪರ್ ಹಿರಂದಾಸ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಯುವವೈದ್ಯೆಯೊಂದಿಗೆ ಹಿರಂದಾಸ್ ಲೈಂಗಿಕ ಸಂಬಂಧ ಹೊಂದಿದ್ದರು. 2021ರಿಂದ 2023ರವರೆಗೆ ಮದುವೆ ಭರವಸೆ ನೀಡುತ್ತ ಮೋಸ ಮಾಡಿದ್ದಾರೆ ಎಂದು ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಹಿರಂದಾಸ್ ವಿರುದ್ಧ ಪ್ರಕರಣ ದಾಖಲಾಗಿದೆ .
ಏಪ್ರಿಲ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಹಿರಂದಾಸ್ ಮುರಳಿಯನ್ನು ಬಂಧಿಸಲಾಗಿತ್ತು. ಜಾಮೀನು ಮೇಲೆ ಹೊರ ಬಂದಿದ್ದ ಅವರು ಬಳಿಕ ಚಿರತೆ ಹಲ್ಲುಗಳನ್ನು ಹೊಂದಿದ್ದ ಆರೋಪದಡಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರು. ಸಾಲು ಸಾಲು ಪ್ರಕರಣಗಳಲ್ಲಿ ರ‍್ಯಾಪರ್ ಹಿರಂದಾಸ್ ಮುರಳಿ ವಿರುದ್ಧ ಆರೋಪ ಕೇಳಿಬಂದಿದ್ದು, ಕೇಸ್ ದಾಖಲಾಗಿದೆ.
ಲೈಂಗಿಕ ದೌರ್ಜನ್ಯ ಆರೋಪಗಳನ್ನು ಎದುರಿಸುತ್ತಿರುವುದು ಇದೇ ಮೊದಲಲ್ಲ; ಮೀಟೂ ಚಳವಳಿಯ ಸಮಯದಲ್ಲಿ ಇದೇ ರೀತಿಯ ಆರೋಪಗಳು ಬಂದವು ಆದರೆ ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ.
Advertisement