Rakesh Poojary ಸಾವು: 21 ದಿನಗಳ ಬಳಿಕ ಕೊನೆಗೂ ಕುಟುಂಬಸ್ಥರ ಭೇಟಿಯಾದ Rishab Shetty!

ಕಾಂತಾರ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿ ಬಳಿಕ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ವೇಳೆ ಅಲ್ಲಿಯೇ ಕುಸಿದು ಸಾವನ್ನಪ್ಪಿದ್ದರು.
Rakesh Poojary
ರಿಷಬ್ ಶೆಟ್ಟಿ
Updated on

ಬೆಂಗಳೂರು: ಇತ್ತೀಚೆಗೆ ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ ಹಾಸ್ಯನಟ ರಾಕೇಶ್ ಪೂಜಾರಿ ಮನೆಗೆ ಕೊನೆಗೂ ನಟ ರಿಷಬ್ ಶೆಟ್ಟಿ ಭೇಟಿ ಮಾಡಿ ಕುಟುಂಸ್ಥರೊಂದಿಗೆ ಸಾಂತ್ವನ ಹೇಳಿದ್ದಾರೆ.

ಕಾಂತಾರ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿ ಬಳಿಕ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ವೇಳೆ ಅಲ್ಲಿಯೇ ಕುಸಿದು ಸಾವನ್ನಪ್ಪಿದ್ದರು. ರಾಕೇಶ್ ನಿಧನರಾದಾಗ ಈ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಅಂತಿಮ ದರ್ಶನ ಪಡೆಯಲು ಬರಲಿಲ್ಲ ಎಂಬುದು ಸಾಕಷ್ಟು ಚರ್ಚೆ ಆಗಿತ್ತು.

ಇದೀಗ 21 ದಿನಗಳ ಬಳಿಕ ರಾಕೇಶ್ ಪೂಜಾರಿ ಮನೆಗೆ ರಿಷಬ್ ಶೆಟ್ಟಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಸಾಥ್ ನೀಡಿದರು. ಉಡುಪಿಯ ಹೂಡೆಯಲ್ಲಿ ರಾಕೇಶ್ ಪೂಜಾರಿ ಮನೆ ಇದೆ. ಅಲ್ಲಿ ರಾಕೇಶ್ ತಂಗಿ ಮತ್ತು ತಾಯಿ ವಾಸವಾಗಿದ್ದಾರೆ. ಅವರಿಗೆ ರಿಷಬ್ ಶೆಟ್ಟಿ ಸಾಂತ್ವನ ಹೇಳಿದ್ದಾರೆ.

Rakesh Poojary
Comedy Khiladigalu season-3 ಖ್ಯಾತಿಯ ರಾಕೇಶ್‌ ಪೂಜಾರಿ ವಿಧಿವಶ

ಅಂದಹಾಗೆ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ಬಿಸಿಯಾಗಿದ್ದು, ಇದೇ ಚಿತ್ರದಲ್ಲಿ ನಟ ರಾಕೇಶ್ ಪೂಜಾರಿ ನಟಿಸಿದ್ದರು. ಈ ಚಿತ್ರದಲ್ಲಿ ರಾಕೇಶ್ ಪೂಜಾರಿ ಅವರಿಗೂ ಒಂದು ವಿಶೇಷ ಪಾತ್ರ ನೀಡಲಾಗಿತ್ತು. ಶೂಟಿಂಗ್​ನಲ್ಲಿ ಕೂಡ ಅವರು ಪಾಲ್ಗೊಂಡಿದ್ದರು. ಆದರೆ ಸಿನಿಮಾದ ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಅವರು ನಿಧನರಾದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com