
ಬೆಂಗಳೂರು: ಆರ್'ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಘಟನೆ ಸಂಬಂಧ ನಟ ಕಮಲ್ ಹಾಸನ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ದುರಂತ ನಡೆದಿದೆ. ಈ ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ದುಃಖದ ಕ್ಷಣದಲ್ಲಿ ಸಂತ್ರಸ್ತರ ಕುಟುಂಬಗಳಿಗೆ ನಾನು ಮಿಡಿಯುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಈ ಪೋಸ್ಟ್ ಇದೀಗ ವೈರಲ್ ಆಗುತ್ತಿದ್ದು, ಇದು ಸಹಾನುಭೂತಿ ಗಳಿಸುವ ತಂತ್ರ ಎಂದು ಟೀಕಿಸುತ್ತಿದ್ದಾರೆ.
ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳುವ ಮೂಲಕ ಕಮಲ್ ಹಾಸನ್ ಅವರು ಕನ್ನಡಿಗರ ವಿರೋಧಕ್ಕೆ ಕಾರಣರಾಗಿದ್ದಾರೆ. ಹೇಳಿಕೆ ಸಂಬಂಧ ರಾಜ್ಯದಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಅವರ ಸಿನಿಮಾ ಬಿಡುಗಡೆ ಅವಕಾಶ ನೀಡಿಲ್ಲ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ವಿಜಯೋತ್ಸವ ಸಂಭ್ರಮಾಚರಿಸಲು ಬುಧವಾರ ಕಾರ್ಯಕ್ರಮ ಆಯೋಜಿಲಾಗಿತ್ತು. ಈ ವೇಳೆ ಆರ್ಸಿಬಿ ಆಟಗಾರರನ್ನು ನೋಡಲು ಜನರು ಮುಗಿ ಬಿದ್ದದ್ದು, ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 47 ಮಂದಿ ಗಾಯಗೊಂಡಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ
Advertisement