
ಬೆಂಗಳೂರು: 'ಅಮಿತಾಬ್ ಬಚ್ಚನ್ ಅವರ ಸಿನಿಮಾಗಳನ್ನು ರೀಮೇಕ್ ಮಾಡಿ ರಾಜ್‌ಕುಮಾರ್ ಫೇಮಸ್ ಆದ್ರು' ಎಂದು ಹೇಳಿದ್ದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಸ್ಯಾಂಡಲ್ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಭರ್ಜರಿ ತಿರುಗೇಟು ನೀಡಿದ್ದಾರೆ.
ಸದಾಕಾಲ ವಿವಾದಗಳಿಂದಲೇ ಸುದ್ದಿಗೆ ಗ್ರಾಸವಾಗಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದು, ಕನ್ನಡದ ವರನಟ ಡಾ.ರಾಜ್ ಕುಮಾರ್ ಕುರಿತು ಮಾತನಾಡಿ ಅನಗತ್ಯ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈ ಹೇಳಿಕೆ ಇದೀಗ ವ್ಯಾಪಕ ವಿವಾದಕ್ಕೆ ಗ್ರಾಸವಾಗಿದೆ.
ನಟ ಗಣೇಶ್ ಕಿಡಿ
ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವರನಟ ಡಾ ರಾಜ್‌ಕುಮಾರ್ ಅವರ ಬಗ್ಗೆ ಹೇಳಿಕೆಯೊಂದನ್ನು ನೀಡಿ ವಿವಾದಕ್ಕೆ ಸಿಲುಕಿದ್ದು, ಈ ಹೇಳಿಕೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗುತ್ತಿದೆ.
ಇದೀಗ ಇದೇ ವಿಚಾರವಾಗಿ ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಪ್ರತಿಕ್ರಿಯೆ ನೀಡಿದ್ದು, 'ಆರ್‌ಜಿವಿ ಅವರ ಸ್ಟೇಟ್‌ಮೆಂಟ್‌ಗೆ ನಾವು ರಿಯಾಕ್ಷನ್ ಕೊಡೋದೇ ತಪ್ಪು. ಕನ್ನಡ ಅಂದರೆ ಡಾ ರಾಜ್‌ಕುಮಾರ್. ಡಾ ರಾಜ್‌ಕುಮಾರ್ ಅಂದ್ರೆ ಕನ್ನಡ. ಆಕಾಶ ನೋಡಿ ಉಗಿದರೆ ನಮ್ಮ ಮೇಲೆ ಬೀಳುತ್ತದೆ. ಹಾಗಾಗಿ ಅಣ್ಣಾವ್ರ ಬಗ್ಗೆ ಮಾತನಾಡಿದ್ರೆ ಆಕಾಶ ನೋಡಿ ಉಗ್ದಂಗೆ. ಆರ್‌ಜಿವಿ ಆಗಿರಲಿ ಅಥವಾ ಯಾರೇ ಆಗಿರಲಿ' ಎಂದು ಹೇಳಿದ್ದಾರೆ.
ಏನು ಹೇಳಿದ್ದರು ಆರ್ ಜಿವಿ?
ಸಂದರ್ಶನವೊಂದರಲ್ಲಿ ಮಾತನಾಡಿದ ರಾಮ್ ಗೋಪಾಲ್ ವರ್ಮಾ, 'ಮೊದಲೆಲ್ಲ ಇಡೀ ದಕ್ಷಿಣದ ಭಾಷೆಗಳಾದಂತಹ ಕನ್ನಡ, ತಮಿಳು, ತೆಲುಗು, ಮಲಯಾಳಂನಲ್ಲಿ ಅಮಿತಾಬ್ ಬಚ್ಚನ್ ಅವರ ಸಿನಿಮಾಗಳನ್ನು ರಿಮೇಕ್ ಮಾಡುತ್ತಿದ್ದರು. ಕಾಲಿವುಡ್ ಸ್ಟಾರ್ ರಜನಿಕಾಂತ್, ಚಿರಂಜೀವಿ, ಎನ್‌ಟಿ ರಾಮರಾಮ್ ಮತ್ತು ಕನ್ನಡದ ರಾಜ್‌ಕುಮಾರ್ ನಂತಹ ನಟರುಗಳು 70 ಮತ್ತು 80ರ ದಶಕದಲ್ಲಿ ಅಮಿತಾಬ್ ಬಚ್ಚನ್ ಅವರ ಸಿನಿಮಾಗಳನ್ನು ರಿಮೇಕ್ ಮಾಡಿ ಭಾರೀ ಜನಪ್ರಿಯತೆ ಗಳಿಸಿದರು.
90ರ ದಶಕದಲ್ಲಿ ಅಮಿತಾಬ್ ಬಚ್ಚನ್ ಅವರು ಸಿನಿಮಾಗಳಿಂದ ಐದು ವರ್ಷಗಳ ಕಾಲ ಬ್ರೇಕ್ ತೆಗೆದುಕೊಂಡಿದ್ದರು. ಆಗ ದಕ್ಷಿಣದ ಸಿನಿಮಾ ನಿರ್ದೇಶಕರು ಬಚ್ಚನ್ ಅವರ ಸ್ಟೈಲ್‌ನಲ್ಲಿ ಮಸಾಲಾ ಚಿತ್ರಗಳನ್ನು ಮಾಡುವುದನ್ನು ಎಂದಿಗೂ ನಿಲ್ಲಿಸಲಿಲ್ಲ. ಇದೇ ರೀತಿ ದಕ್ಷಿಣ ಸಿನಿ ತಾರೆಯರು ಕೂಡ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡರು, ಅದು ಇಂದಿಗೂ ಮುಂದುವರೆದಿದೆ' ಎಂದು ಹೇಳಿದ್ದರು.
Advertisement