ಕಾಂತಾರ ಚಾಪ್ಟರ್ 1 ಚಿತ್ರದ ಕಲಾವಿದ ಹೃದಯಾಘಾತದಿಂದ ಸಾವು: ತೀರ್ಥಹಳ್ಳಿಯಲ್ಲಿ ದುರ್ಘಟನೆ

ಕಾಂತಾರ ಚಾಪ್ಟರ್ 1 ಸಿನಿಮಾ ಕಲಾವಿದ ಹೃದಯಾಘಾತದಿಂದ ತೀರ್ಥಹಳ್ಳಿಯ ಆಗುಂಬೆ ಹೋಂಸ್ಟೇಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Representational image
ಸಾಂದರ್ಭಿಕ ಚಿತ್ರ
Updated on

ತೀರ್ಥಹಳ್ಳಿ: ಕಾಂತಾರ ಚಾಪ್ಟರ್ 1 ಸಿನಿಮಾ ಹಲವು ಕಾರಣಗಳಿಗೆ ಸುದ್ದಿಯಾಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ ಇಬ್ಬರು ಕಲಾವಿದರು ಈ ಹಿಂದೆ ಮೃತಪಟ್ಟಿದ್ದರು. ಇದೀಗ ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾಂತಾರ ಚಾಪ್ಟರ್ 1 ಸಿನಿಮಾ ಕಲಾವಿದ ಹೃದಯಾಘಾತದಿಂದ ತೀರ್ಥಹಳ್ಳಿಯ ಆಗುಂಬೆ ಹೋಂಸ್ಟೇಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು ಅವರನ್ನು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿ ಕೆ ಎಂದು ಗುರುತಿಸಲಾಗಿದೆ.

ಅವರು ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಳ್ಳಲು ಆಗುಂಬೆ ಹೋಂ ಸ್ಟೇಯಲ್ಲಿ ಕಳೆದ ರಾತ್ರಿ ತಂಗಿದ್ದ ವೇಳೆ ದುರ್ಘಟನೆ ನಡೆದಿದೆ.

Representational image
ಕಾಂತಾರ 2: ನದಿಯಲ್ಲಿ ಮುಳುಗಿ ಕಿರಿಯ ಕಲಾವಿದ ಸಾವು, ಚಿತ್ರೀಕರಣ ತಾತ್ಕಾಲಿಕ ಸ್ಥಗಿತ

ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಕೂಡಲೇ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಾಂತಾರ ಚಾಪ್ಟರ್ 1 ಸಿನಿಮಾ ಚಿತ್ರೀಕರಣ ಆರಂಭವಾದ ನಂತರ ಇದು ಮೂರನೇ ಸಾವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com