ರಾಮ್ ಚರಣ್ ನಿರ್ಮಾಣದ 'ದಿ ಇಂಡಿಯಾ ಹೌಸ್' ಸಿನಿಮಾ ಶೂಟಿಂಗ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ: ಹಲವರಿಗೆ ಗಾಯ

ನೀರಿನ ದೊಡ್ಡ ಟ್ಯಾಂಕರ್‌ ಒಡೆದು ಪ್ರವಾಹ ಸೃಷ್ಟಿಯಾದ ಪರಿಣಾಮ ಸಹಾಯಕ ಕ್ಯಾಮೆರಾಮೆನ್‌ ಮತ್ತು ಇನ್ನೂ ಕೆಲವು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ
'ದಿ ಇಂಡಿಯಾ ಹೌಸ್' ಸಿನಿಮಾ ಶೂಟಿಂಗ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ
'ದಿ ಇಂಡಿಯಾ ಹೌಸ್' ಸಿನಿಮಾ ಶೂಟಿಂಗ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ
Updated on

ತೆಲುಗಿನ ʻದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ಭಾರೀ ಅವಘಡ ಸಂಭವಿಸಿದೆ. ಚಿತ್ರೀಕರಣದ ವೇಳೆ ನೀರಿನ ಟ್ಯಾಂಕರ್‌ ಸ್ಫೋಟಗೊಂಡು, ಪ್ರವಾಹ ರೀತಿಯಲ್ಲಿ ನೀರು ನುಗ್ಗಿದ ಪರಿಣಾಮ ಹಲವರು ಗಾಯಗೊಂಡಿದ್ದಾರೆ.

ನೀರಿನ ದೊಡ್ಡ ಟ್ಯಾಂಕರ್‌ ಒಡೆದು ಪ್ರವಾಹ ಸೃಷ್ಟಿಯಾದ ಪರಿಣಾಮ ಸಹಾಯಕ ಕ್ಯಾಮೆರಾಮೆನ್‌ ಮತ್ತು ಇನ್ನೂ ಕೆಲವು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಕುರಿತ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.

ಶಂಷಾಬಾದ್ ಬಳಿ ಸಿನಿಮಾ ಶೂಟಿಂಗ್‌ಗಾಗಿ ದೊಡ್ಡ ನೀರಿನ ಟ್ಯಾಂಕರ್‌ ನಿರ್ಮಾಣ ಮಾಡಲಾಗಿತ್ತು. ಭಾರೀ ಒತ್ತಡದಿಂದಾಗಿ ನೀರಿನ ಟ್ಯಾಂಕರ್‌ ಸ್ಫೋಟಗೊಂಡು ಪ್ರವಾಹವೇ ಸೃಷ್ಟಿಯಾಯ್ತು. ಭಾರೀ ಪ್ರಮಾಣದ ನೀರಿನ ವೇಗಕ್ಕೆ ಸಿಕ್ಕಿ ಕ್ಯಾಮೆರಾಮೆನ್‌, ಇತರ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಸ್ತುತ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಸಮಯದಲ್ಲಿ ರಾಮ್ ಚರಣ್ ಕೂಡ ಸೆಟ್‌ನಲ್ಲಿದ್ದರೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲವಾದರೂ, ಚಿತ್ರದ ಚಿತ್ರೀಕರಣವನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com