Director Nanda Kishore
ನಿರ್ದೇಶಕ ನಂದ ಕಿಶೋರ್

Sandalwood: 'ನಿರ್ದೇಶಕ Nanda Kishore ವಂಚಕ, 22 ಲಕ್ಷ ರೂ ನೀಡಬೇಕು'; ನಟ ಶಬರೀಶ್ ಗಂಭೀರ ಆರೋಪ

ರನ್ನ, ಮಾಣಿಕ್ಯ, ಪೊಗರು, ಮುಕುಂದ ಮುರಾರಿ, ಅಧ್ಯಕ್ಷ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಸಿರುವ ಖ್ಯಾತ ನಿರ್ದೇಶಕ ನಂದ ಕಿಶೋರ್ 22 ಲಕ್ಷ ರೂಗಳನ್ನು ಪಡೆದು ವಂಚಿಸಿದ್ದಾರೆ ಎಂದು...
Published on

ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ನಂದ ಕಿಶೋರ್ ವಿರುದ್ಧ 22 ಲಕ್ಷ ರೂ ವಂಚನೆ ಮಾಡಿದ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ನಟನೋರ್ವ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ದೂರು ನೀಡುವುದಾಗಿ ಹೇಳಿದ್ದಾರೆ.

ಹೌದು.. ರನ್ನ, ಮಾಣಿಕ್ಯ, ಪೊಗರು, ಮುಕುಂದ ಮುರಾರಿ, ಅಧ್ಯಕ್ಷ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಸಿರುವ ಖ್ಯಾತ ನಿರ್ದೇಶಕ ನಂದ ಕಿಶೋರ್ 22 ಲಕ್ಷ ರೂಗಳನ್ನು ಪಡೆದು ವಂಚಿಸಿದ್ದಾರೆ ಎಂದು ನಟ ಶಬರೀಶ್ ಗಂಭೀರ ಆರೋಪ ಮಾಡಿದ್ದಾರೆ.

ನಿರ್ದೇಶಕ ನಂದ ಕಿಶೋರ್ ತಮ್ಮಿಂದ 22 ಲಕ್ಷ ರೂ ಹಣ ಪಡೆದುಕೊಂಡಿದ್ದರು. ಈಗ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಹಣ ವಾಪಸ್ ಕೊಡುವಂತೆ ಕೇಳಿದರೆ ಸುದೀಪ್ ಅವರ ಹೆಸರು ಬಳಸಿ ನನಗೆ ಬೆದರಿಕೆ ಸಹ ಹಾಕಿದ್ದಾರೆ ಎಂದು ನಟ ಆರೋಪ ಮಾಡಿದ್ದಾರೆ.

ಫಿಲಂ ಚೇಂಬರ್ ಗೆ ದೂರು

ಇನ್ನು ಈ ಸಂಬಂಧ ನಟ ಶಬರೀಶ್ ಕರ್ನಾಟಕ ಫಿಲಂ ಚೇಂಬರ್​​ಗೆ ಈ ಬಗ್ಗೆ ದೂರು ನೀಡುವುದಾಗಿ ಹೇಳಿದ್ದು, ಕೂಡಲೇ ಫಿಲಂ ಚೇಬರ್ ತನ್ನ ದೂರು ಸ್ವೀಕರಿಸಿ ಸಮಸ್ಯೆ ಬಗೆಹರಿಸುವಂತೆ ಕೇಳಿದ್ದಾರೆ.

Director Nanda Kishore
ಮೂರು ವರ್ಷಗಳ ದಾಂಪತ್ಯ ಜೀವನ ಅಂತ್ಯ: ಯುವ ಗಾಯಕಿ ಅಖಿಲಾ ಪಜಿಮಣ್ಣು ವಿಚ್ಛೇದನಕ್ಕೆ ಅರ್ಜಿ!

ನಟ ಶಬರೀಶ್ ಆರೋಪವೇನು?

ಕಿಚ್ಚ ಸುದೀಪ್ ಅವರ ಅಭಿಮಾನಿ ಆಗಿರುವ ಶಬರೀಶ್ ಶೆಟ್ಟಿ ಆರೋಪಿಸಿರುವಂತೆ, ನಿರ್ದೇಶಕ ನಂದ ಕಿಶೋರ್ ಸುಮಾರು ಒಂಬತ್ತು ವರ್ಷಗಳ ಹಿಂದೆ ಜಿಮ್ ಒಂದರಲ್ಲಿ ಪರಿಚಯವಾದರಂತೆ. ಪರಿಚಯ ಗೆಳೆತನವಾಗಿ, ನಂದ ಕಿಶೋರ್, ಶಬರೀಶ್ ಅವರನ್ನು ಸಿಸಿಎಲ್​​ನಲ್ಲಿ ಆಡಿಸುವುದಾಗಿ ಭರವಸೆ ನೀಡಿ, ಶಬರೀಶ್ ಅವರಿಂದ 22 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದರಂತೆ. ಇದಕ್ಕಾಗಿ ಶಬರೀಶ್ ತನ್ನ ಮನೆಯಲ್ಲಿದ್ದ ಚಿನ್ನ ಅಡವಿಟ್ಟು ಹಣ ಕೊಟ್ಟಿದ್ದೆ ಎಂದು ಹೇಳಿದ್ದಾರೆ.

ಆದರೆ ಈ ವರೆಗೆ ನಂದ ಕಿಶೋರ್ ತಮಗೆ ಹಣ ಮರಳಿಸಿಲ್ಲ ಎಂದು ಶಬರೀಶ್ ಆರೋಪಿಸಿದ್ದಾರೆ. ಹಣ ಮರಳಿಸುವಂತೆ ಕೇಳಿದರೆ ಬೆದರಿಕೆ ಹಾಕುತ್ತಾರೆ. ನಾನು ಹಣ ಕೇಳಿದಾಗೆಲ್ಲ ಸುದೀಪ್ ಸರ್ ಹೆಸರು ಹೇಳಿ ಯಾಮಾರಿಸಿದರು. ಸಿನಿಮಾದಲ್ಲಿ ಅವಕಾಶ ಕೊಡ್ತಿನಿ ಅಂತ ಹೇಳಿ ನನಗೆ, ಮೋಸ ಮಾಡಿದ್ದಾರೆ. ಇತ್ತ, ನಾನು ಕೊಟ್ಟ ಹಣವೂ ವಾಪಸ್ ಕೊಟ್ಟಿಲ್ಲ. ಸಿನಿಮಾದಲ್ಲಿ ಅವಕಾಶವನ್ನು ಕೊಡಲಿಲ್ಲ, ನಾನು ಸಿಸಿಎಲ್ ನಲ್ಲಿ ಆಡುವ ಕನಸು ಕಟ್ಟಿಕೊಂಡಿದ್ದೆ, ಕೆಸಿಸಿ ಟೂರ್ನಿಯಲ್ಲಿ ನಾನು ಎರಡು ಸೀಸನ್ ಆಡಿದ್ದೇನೆ, ಹಣ ಕೇಳಿದರೆ ನಿನ್ನ ಕೆಸಿಸಿಯಿಂದ ಹೊರ ಹಾಕ್ತಿನಿ ಅಂತ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಶಬರೀಶ್ ಆರೋಪಿಸಿದ್ದಾರೆ.

ಅಲ್ಲದೆ, ‘ನಾನು 200 ಗ್ರಾಂ ಚಿನ್ನ ಅಡವಿಟ್ಟು ಅವರಿಗೆ ಹಣ ಕೊಟ್ಟಿದ್ದೆ, ಆ ಚಿನ್ನದ ಲೋನ್ ಕಟ್ಟಿ ಎಂದೆ ಅದನ್ನು ಕಟ್ಟಲಿಲ್ಲ. ನಾನು ಬಡ್ಡಿ ಕಟ್ಟಿದೆ. ಬಡ್ಡಿಯ ಮೇಲೆ ಬಡ್ಡಿ ಬೆಳೆದು ಆ ಚಿನ್ನವನ್ನು ಹರಾಜು ಹಾಕಲಾಯ್ತು. ನನ್ನ ಬಳಿ ಎಲ್ಲದಕ್ಕೂ ದಾಖಲೆ ಇದೆ. ‘ಪೊಗರು’ ಸಿನಿಮಾದಲ್ಲಿ ಅವಕಾಶ ಕೊಡ್ತೀನಿ ಅಂದ್ರು ಕೊಡಲಿಲ್ಲ. ‘ರಾಣಾ’ ಸಿನಿಮಾದಲ್ಲಿ ಅವಕಾಶ ಕೊಡ್ತೀನಿ ಅಂದ್ರು ಕೊಡಲಿಲ್ಲ. ಈಗ ಹಣ ಕೇಳಿದರೆ ಏನು ಮಾಡ್ಕೊತೀಯೋ ಮಾಡ್ಕೊ ಎಂದು ಬೆದರಿಕೆ ಹಾಕಿದ್ದಾರೆ.

Director Nanda Kishore
'ಉಸಿರು' ಚಿತ್ರದ ಟ್ಯಾಗ್‌ಲೈನ್ ಒಂದು ರಹಸ್ಯಮಯ ಸುಳಿವು ನೀಡುತ್ತದೆ: ನಿರ್ದೇಶಕ ಪ್ರಭಾಕರ್

ನನ್ನ ಸಿನಿಮಾ ರಿಲೀಸ್ ಆಗ್ತಿದೆ.. ನನಗೆ ನೆರವು ಬೇಕು

ನಾನು ಸುದೀಪ್ ಸರ್ ಜೊತೆ ಕ್ರಿಕೆಟ್ ಆಡುವ ಆಸೆಯಿಂದ ಸುಮ್ಮನಾಗ್ತಿದ್ದೆ, ಈಗ ನಾನು ‘ರಾಮಧೂತ’ ಸಿನಿಮಾ ಮಾಡಿದ್ದೇನೆ, ಶೂಟಿಂಗ್ ಪೂರ್ತಿ ಆಗಿದೆ. ಸಿನಿಮಾ ರಿಲೀಸ್ ಮಾಡಲು ನನ್ನ ಬಳಿ ಹಣ ಇಲ್ಲ, ನನ್ನ ಹಣ ವಾಪಸ್ ಕೊಡಿ ಅಂತ ಕೇಳಿದರೆ ಏನು ಮಾಡ್ಕೊತೀಯಾ ಮಾಡ್ಕೊ ಅಂದಿದ್ದಾರೆ. ನಮ್ಮಂತ ಪುಟ್ಟ ಕಲಾವಿದರು ಹೇಗೆ ಬದುಕೊದು ಗೊತ್ತಾಗ್ತಿಲ್ಲ, ನಾನು ಈ ವಿಚಾರವನ್ನು ಸುದೀಪ್ ಸರ್ ಗಮನಕ್ಕೆ ತರಲು ಪ್ರಯತ್ನ ಪಟ್ಟಾಗ ‌ನನ್ನ ತಡೆಯಲಾಯ್ತು. ನನ್ನ ಹಣ ನನಗೆ ಕೊಡದೇ ಇದ್ದರೆ ನಂದ ಕಿಶೋರ್ ವಿರುದ್ದ ಕಾನೂನು ಮೊರೆ ಹೋಗುತ್ತೀನಿ. ಈ ವಿಷಯವನ್ನು ಶಿವಣ್ಣ, ಸುದೀಪ್ ಸರ್ ಗಮನಕ್ಕೆ ತರುತ್ತೇನೆ. ಫಿಲ್ಮ್ ಚೇಂಬರ್​​ಗೆ ದೂರು ಕೊಡ್ತಿನಿ’ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com