
ಉಪಾಧ್ಯಕ್ಷ ಚಿತ್ರದ ಮೂಲಕ ಕಾಮಿಡಿಯನ್ ಇಂದ ನಾಯಕನಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ನಟ ಟಿಕ್ಕಣ್ಣ ಇದೀಗ ಮತ್ತೊಂದು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಮುಂಬರುವ ಚಿತ್ರ ಲಕ್ಷ್ಮಿಪುತ್ರದಲ್ಲಿ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದು, ಹೊಸದಾಗಿ ಬಿಡುಗಡೆಯಾದ ಪೋಸ್ಟರ್‌ನಲ್ಲಿ ಅವರು ಸಾಂಪ್ರದಾಯಿಕ ಉಡುಪಿನಲ್ಲಿ, ಕನ್ನಡಕ ಧರಿಸಿ, ಬಾಳೆಗೊನೆಯನ್ನು ಹಿಡಿದಿರುವುದು ಕಂಡುಬಂದಿದೆ. ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಎರಡನೇ ಚಿತ್ರ ಇದಾಗಿದ್ದು, ಈಗಾಗಲೇ ಅವರ ಅಭಿಮಾನಿಗಳಲ್ಲಿ ಉತ್ಸಾಹವನ್ನು ಹುಟ್ಟುಹಾಕಿದೆ.
ಲಕ್ಷ್ಮಿಪುತ್ರ ಚಿತ್ರವನ್ನು ವಿಜಯ್ ಎಸ್ ಸ್ವಾಮಿ ನಿರ್ದೇಶಿಸಿದ್ದು, ತಾಯಿ ಮತ್ತು ಮಗನ ನಡುವಿನ ಬಾಂಧವ್ಯದ ಸುತ್ತ ಸುತ್ತುತ್ತದೆ. ನಟಿ ತಾರಾ ತಾಯಿಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕಥೆ ಮತ್ತು ಚಿತ್ರಕಥೆಯನ್ನು ಎಪಿ ಅರ್ಜುನ್ ಬರೆದಿದ್ದಾರೆ. ಪ್ರಶಾಂತ್ ರಾಜಪ್ಪ ಮತ್ತು ವಿಜಯ್ ಈಶ್ವರ್ ಅವರೊಂದಿಗೆ ಸಂಭಾಷಣೆಯನ್ನು ಸಹ ಬರೆದಿದ್ದಾರೆ. ಅಲ್ಲದೆ, ಅರ್ಜುನ್ ತಮ್ಮ ಎಪಿ ಅರ್ಜುನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಪತ್ನಿ ಅನ್ನಪೂರ್ಣ ಅರ್ಜುನ್ ಅವರೊಂದಿಗೆ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವನ್ನು ರವಿಕಿರಣ್ ಗೌಡ ಸಹ-ನಿರ್ಮಾಣ ಮಾಡಿದ್ದಾರೆ.
ಚಿತ್ರದ ಆ್ಯಕ್ಷನ್ ಸೀಕ್ವೆನ್ಸ್‌ಗಳಿಗೆ ರವಿ ವರ್ಮಾ ನಿರ್ದೇಶನ ಮಾಡಿದ್ದಾರೆ. ಗಿರೀಶ್ ಆರ್ ಗೌಡ ಅವರ ಛಾಯಾಗ್ರಹಣ ಮತ್ತು ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಲಕ್ಷ್ಮೀಪುತ್ರ ಚಿತ್ರದಲ್ಲಿ ಧರ್ಮಣ್ಣ ಕಡೂರ್ ಮತ್ತು ಕುರಿ ಪ್ರತಾಪ್ ಪ್ರಮುಖ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
Advertisement