
ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಯಶ್ ಶೆಟ್ಟಿ ಮತ್ತು ಹರ್ಷಿತಾ ರಾಮಚಂದ್ರ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಜಂಗಲ್ ಮಂಗಲ್ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
ಚಿತ್ರದ ಟ್ರೇಲರ್ ನ್ನು ಇತ್ತೀಚೆಗೆ ಬಿಡುಗಡೆ ಮಾಡಿರುವ ಚಿತ್ರತಂಡ, ಜುಲೈ.4ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
'ಜಂಗಲ್ ಮಂಗಲ್' ಸಿನಿಮಾಗೆ ನಿರ್ದೇಶಕದ ರಕ್ಷಿತ್ ಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆ. ಈ ಸಿನಿಮಾ ಬಗ್ಗೆ ಒಂದು ಇಂಟ್ರೆಸ್ಟಿಂಗ್ ಕತೆಯಿದೆ. ಅದನ್ನು ನಿರ್ದೇಶಕ ರಕ್ಷಿತ್ ಕುಮಾರ್ ಅವರೇ ಹೇಳಿದ್ದಾರೆ.
ಚಿತ್ರದ ನಾಯಕ ನಟನಾಗಿ ನಟಿಸುವ ಗುರಿ ಇರಲಿಲ್ಲ. ಆದರೆ, ಚಿತ್ರ ಕಥೆಯು ನನ್ನನ್ನು ನಾಯಕನಾಟಿ ನಟಿಸುವಂತೆ ಒತ್ತಾಯಿಸಿತು. ಟ್ರೇಲರ್ ನೋಡಿದ ಯೋಗರಾಜ್ ಭಟ್ ಅವರು ಜಂಗಲ್ ಮಂಗಲ್ ಶೀರ್ಷಿಕೆ ಇರುವಂತೆ ಸೂಚಿಸಿದ್ದರು. ಸಿನಿಮಾ ಮೆಚ್ಚಿಕೊಂಡ ಮತ್ತೊಬ್ಬ ನಿರ್ದೇಶಕ ಸಿಂಪಲ್ ಸುನಿ ತಮ್ಮ ಸುನಿ ಸಿನಿಮಾಸ್ ಬ್ಯಾನರ್ ಮೂಲಕ ಚಿತ್ರವನ್ನು ಅರ್ಪಿಸಲು ಮುಂದಾದರು ಎಂದು ನಿರ್ದೇಶಕರು ಹೇಳಿದ್ದಾರೆ.
ಅಂದ್ಹಾಗೆ 'ಜಂಗಲ್ ಮಂಗಲ್' ಇದೊಂದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆ. ಈ ಸಿನಿಮಾವನ್ನು ನಿರ್ದೇಶಕ ರಕ್ಷಿತ್ ಕುಮಾರ್ ಹಾಗೂ ಅವರ ಒಂದಷ್ಟು ಮಂದಿ ಸ್ನೇಹಿತರೆಲ್ಲ ಸೇರಿಕೊಂಡು ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ರಕ್ಷಿತ್ ಹತ್ತು ವರ್ಷಗಳಿಂದ ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಈ ಸಿನಿಮಾ ಅವರಿಗೆ ಚೊಚ್ಚಲ ಸಿನಿಮಾ. ಅರೆ ಮಲೆನಾಡಿನಲ್ಲಿ ನಡೆಯುವ ಕಥೆಯಾಗಿದ್ದರೂ, ಯೂನಿವರ್ಸಲ್ ಸಬ್ಜೆಕ್ಟ್ ಎನ್ನಬಹುದು. ಎಲ್ಲಾ ಪ್ರಾಂತ್ಯದಲ್ಲೂ ನಡೆಯುವ ಕಥೆಯೂ ಹೌದು ಎಂದು ರಕ್ಷಿತ್ ತಿಳಿಸಿದ್ದಾರೆ.
ಸಹ್ಯಾದ್ರಿ ಸ್ಟುಡಿಯೋಸ್ ಅಡಿಯಲ್ಲಿ ಪ್ರಜೀತ್ ಹೆಗ್ಡೆ ಮತ್ತು ಸಂಪಾದಕ-ನಿರ್ಮಾಪಕ ಮನು ಶೆಡ್ಗರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.ಸಿನಿಮಾದ ಪ್ರಮುಖ ಪಾತ್ರದಲ್ಲಿ ಯಶ್ ಶೆಟ್ಟಿ ನಟಿಸಿದ್ದರೆ, ಇವರಿಗೆ ನಾಯಕಿಯಾಗಿ ಹರ್ಷಿತಾ ರಾಮಚಂದ್ರ ನಟಿಸಿದ್ದಾರೆ. ಇವರೊಂದಿಗೆ ಉಗ್ರಂ ಮಂಜು, ಬಲ ರಾಜವಾಡಿ ಸೇರಿದಂತೆ ಹಲವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು ಖಳನಾಯಕನ ಪಾತ್ರದಲ್ಲಿ ನಟಿಸಿದ್ದಾರೆ.
Advertisement