Sanjana Galrani
ಸಂಜನಾ ಗಲ್ರಾನಿ

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಬಿಗ್ ರಿಲೀಫ್!

ನಟಿ ಸಂಜನಾ ಗಲ್ರಾನಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.
Published on

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ನಟಿಯನ್ನು 2020ರ ಸೆಪ್ಟೆಂಬರ್ 8 ರಂದು ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ವಿಭಾಗ (CCB) ಬಂಧಿಸಿತ್ತು. ಬಂಧನಕ್ಕೊಳಗಾದ ನಂತರ, ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದರ ಪರಿಣಾಮವಾಗಿ, ನ್ಯಾಯಾಲಯವು ಸಂಜನಾ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಹೈಕೋರ್ಟ್ ಪೀಠವು, ಸದ್ಯ ಪ್ರಕರಣದ ಅಡಿಯಲ್ಲಿ ಈ ಹಿಂದೆ ಮಾಡಿದ ಆಪಾದಿತ ಅಪರಾಧಗಳಿಗೆ ಸಂಬಂಧಿಸಿದಂತೆ ಅರ್ಜಿದಾರರನ್ನು ವಿಚಾರಣೆಗೆ ಒಳಪಡಿಸುವಂತಿಲ್ಲ. ಪೊಲೀಸರು ಪ್ರತಿಯೊಂದು ಅಪರಾಧಕ್ಕೂ ಪ್ರತ್ಯೇಕ ಎಫ್‌ಐಆರ್‌‌ಗಳನ್ನು ದಾಖಲಿಸಬೇಕು ಎಂದು ಸೂಚಿಸಿದೆ.

ಅರ್ಜಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರಿಸುವುದು ಕಾನೂನು ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುತ್ತದೆ ಎಂದು ನ್ಯಾಯಾಲಯ ಹೇಳಿದೆ. ಸದ್ಯದ ಪರಿಸ್ಥಿತಿಯಲ್ಲಿ ಪ್ರಕರಣವನ್ನು ಮುಂದುವರಿಸುವುದು ನ್ಯಾಯಯುತವಾಗಿಲ್ಲ ಎಂದು ಪರಿಗಣಿಸಿದ ನ್ಯಾಯಾಲಯ ಅರ್ಜಿದಾರರ ಪರವಾಗಿ ತೀರ್ಪು ನೀಡಿದ್ದು, ಪ್ರಕರಣವನ್ನು ರದ್ದುಗೊಳಿಸಿದೆ.

Sanjana Galrani
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಪೊಲೀಸರ ಕೈ ಸೇರಿದ ಎಫ್ ಎಸ್ ಎಲ್ ವರದಿಯಲ್ಲಿ 'ಪಾಸಿಟಿವ್ ರಿಪೋರ್ಟ್'!

ನಟಿ ಸಂಜನಾ ಗಲ್ರಾನಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com