ಮಾರ್ಚ್ 17ಕ್ಕೆ ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ: ಅಂಚೆ ಇಲಾಖೆಯಿಂದ ವಿಶೇಷ ಪೋಸ್ಟ್ ಕಾರ್ಡ್

ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅಂಚೆ ಇಲಾಖೆಯ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.
Special post card
ವಿಶೇಷ ಪೋಸ್ಟ್ ಕಾರ್ಡ್ ಬಿಡುಗಡೆ
Updated on: 

ಬೆಂಗಳೂರು: ಮಾರ್ಚ್ 17, ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟುಹಬ್ಬ. ಈ ಸಂದರ್ಭವನ್ನು ವಿಶೇಷ ಸ್ಮರಣೀಯವಾಗಿಸಲು ಭಾರತೀಯ ಅಂಚೆ ಇಲಾಖೆ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ. ಬೆಂಗಳೂರು ಕೇಂದ್ರ ಅಂಚೆ ಮಹಾಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದು ಅಪ್ಪು ಸ್ಮರಣಾರ್ಥ ವಿಶೇಷ ಪಿಚ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.

ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅಂಚೆ ಇಲಾಖೆಯ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.

Special post card
'ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ': ಎಲ್ಲಾ ತಾಲೂಕುಗಳಿಗೂ ವಿಸ್ತರಣೆಗೆ ಸರ್ಕಾರ ಮುಂದು

ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರ ಮತ್ತು ಅವರ ಸಿನಿ ಪಯಣವನ್ನು ಬಿಂಬಿಸುವ ಚಿತ್ರಗಳು ಈ ಪೋಸ್ಟ್ ಕಾರ್ಡ್ ನಲ್ಲಿದೆ. ಇದು ಅವರ ಅಭಿಮಾಣಿಗಳಿಗೆ ಖುಷಿ ಕೊಟ್ಟಿದ್ದು ಸದ್ಯ ಎಲ್ಲಾ ಕಡೆಗಳಲ್ಲಿ ಇದನ್ನು ಶೇರ್ ಮಾಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com