ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ 'ಫೈರ್ ಫ್ಲೈ' ಚಿತ್ರದ ಮೊದಲ ಹಾಡು ಬಿಡುಗಡೆ
ಶ್ರೀ ಮುತ್ತು ಸಿನಿ ಸರ್ವೀಸಸ್ ಬ್ಯಾನರ್ ಅಡಿಯಲ್ಲಿ ನಿವೇದಿತಾ ಶಿವರಾಜ್‌ಕುಮಾರ್ ಅವರ ಚೊಚ್ಚಲ ನಿರ್ಮಾಣದ 'ಫೈರ್ ಫ್ಲೈ' ಚಿತ್ರ ಏಪ್ರಿಲ್ 24 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಜುಗಡೆಯಾಗಲಿದೆ. ಚಿತ್ರದ ಪೋಸ್ಟರ್‌ನಿಂದ ಟೀಸರ್‌ವರೆಗೆ, ಚಿತ್ರವು ಕುತೂಹಲವನ್ನು ಹುಟ್ಟುಹಾಕಿದೆ. ಇದೀಗ, 'ಇನ್ ದಿ ನೈಟ್' ಎಂಬ ಶೀರ್ಷಿಕೆಯ ಚಿತ್ರದ ಮೊದಲ ಹಾಡನ್ನು ಆನಂದ್ ಆಡಿಯೋ ಮ್ಯೂಸಿಕ್ ಲೇಬಲ್ ಮೂಲಕ ಬಿಡುಗಡೆ ಮಾಡಲಾಗಿದೆ.
ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದು, ಕಪಿಲ್ ಕಪಿಲನ್ ಧ್ವನಿ ನೀಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.
ವಂಶಿ ನಿರ್ದೇಶನದ 'ಫೈರ್‌ಫ್ಲೈ' ಚಿತ್ರದಲ್ಲಿ ವಂಶಿ ಅವರೇ ನಾಯಕನಾಗಿ ನಟಿಸಿದ್ದಾರೆ. ಇನ್ನುಳಿದಂತೆ ಅಚ್ಯುತ್ ಕುಮಾರ್, ಸುಧಾರಾಣಿ, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಚಿತ್ಕಲಾ ಬಿರಾದಾರ್ ಮತ್ತು ಮೂಗು ಸುರೇಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರಕ್ಕೆ ಅಭಿಲಾಷ್ ಕಲಾಥಿ ಅವರ ಛಾಯಾಗ್ರಹಣ, ರಘು ನಿಡುವಳ್ಳಿ ಅವರ ಸಂಭಾಷಣೆ, ಸುರೇಶ್ ಆರ್ಮುಗಂ ಅವರ ಸಂಕಲನ, ವರದರಾಜ್ ಕಾಮತ್ ಅವರ ಕಲಾ ನಿರ್ದೇಶನ, ಅರ್ಜುನ್ ರಾಜ್ ಅವರ ಫೈಟ್ ಮತ್ತು ರಾಹುಲ್ ಮಾಸ್ಟರ್ ಅವರ ನೃತ್ಯ ಸಂಯೋಜನೆ ಇದೆ.
ದಂತಕಥೆ ಡಾ. ರಾಜ್‌ಕುಮಾರ್ ಅವರ ಜನ್ಮ ವಾರ್ಷಿಕೋತ್ಸವದ ದಿನ ಚಿತ್ರ ಬಿಡುಗಡೆಗೆ ಚಿತ್ರತಂಡ ಯೋಜನೆ ರೂಪಿಸಿದೆ. ಇದು ಫ್ಯಾಮಿಲಿ ಎಂಟರ್‌ಟೈನರ್ ಚಿತ್ರವಾಗಿದ್ದು, ಎಲ್ಲ ವಯಸ್ಸಿನ ವೀಕ್ಷಕರನ್ನು ಆಕರ್ಷಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಾರೆ ನಿರ್ಮಾಪಕರು.

