
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ 'ಸಿಕಂದರ್' ಚಿತ್ರ ಮಾರ್ಚ್ 30 ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಈಗಾಗಲೇ ಬಾಕ್ಸ್ ಆಫೀಸ್ ನಲ್ಲಿ ರೂ. 1.92 ಕೋಟಿ ಮುಂಗಡ ಬುಕ್ಕಿಂಗ್ ಆಗಿದೆ.
9,351 ಶೋಗಳಲ್ಲಿ ಸುಮಾರು 67,533 ಟಿಕೆಟ್‌ಗಳು ಮಾರಾಟವಾಗಿವೆ. ಸಿಕಂದರ್ ಉತ್ತಮ ನಿರೀಕ್ಷೆ ಮೂಡಿಸಿದೆ. ವಿದೇಶಗಳಲ್ಲಿಯೂ ಸಿನಿಮಾ ಸದ್ದು ಮಾಡುತ್ತಿದ್ದು, ಹಾಲೆಂಡ್ ಮತ್ತು ಜರ್ಮನಿಯಲ್ಲಿ ಅಡ್ವಾನ್ಸ್ ಟಿಕೆಟ್ಸ್ ಕೆಲವೇ ಗಂಟೆಗಳಲ್ಲಿ ಮಾರಾಟವಾಗಿವೆ.
ವಿಮರ್ಶಕ ತರಣ್ ಆದರ್ಶ್, ಸಿಕಂದರ್ ತನ್ನ ಮೊದಲ ದಿನದಂದು 43 ಕೋಟಿ ರೂಪಾಯಿಯ ವ್ಯವಹಾರ ನಡೆಸಲಿದೆ ಎಂದು ಅಂದಾಜಿಸಿದ್ದಾರೆ.
ಚಿತ್ರ ಬಿಡುಗಡೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಸಲ್ಮಾನ್ ಖಾನ್, ಈ ಈದ್‌ನಲ್ಲಿ ಚಿತ್ರಮಂದಿರಗಳಲ್ಲಿ ಸಿಗೋಣಾ ಎಂದು ಬರೆದುಕೊಂಡಿದ್ದಾರೆ.
ಎ.ಆರ್. ಮುರುಗದಾಸ್ ನಿರ್ದೇಶನದ ಮತ್ತು ಸಾಜಿದ್ ನಾಡಿಯಾಡ್‌ವಾಲಾ ನಿರ್ಮಿಸಿರುವ ಸಿಕಂದರ್ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಮತ್ತು ಸತ್ಯರಾಜ್ ಖಳನಾಯಕನಾಗಿ ನಟಿಸಿದ್ದಾರೆ. ಇನ್ಸ್‌ಪೆಕ್ಟರ್ ಪ್ರಕಾಶ್ ಪಾತ್ರದಲ್ಲಿ ಕಿಶೋರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Advertisement