
ಭಾರತೀಯ ಚಿತ್ರರಂಗದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ಸದಾ ತಮ್ಮ ಹೇಳಿಕೆಗಳಿಂದ ಸಖತ್ ಟ್ರೋಲ್ ಆಗುತ್ತಿರುತ್ತಾರೆ. ಇದಕ್ಕೆ ಮತ್ತೊಂದು ಉದಾಹರಣೆ ಎಂದರೇ. ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಸಿಕಂದರ್ ಚಿತ್ರದ ಪ್ರಚಾರದ ಸಂದರ್ಭದಲ್ಲಿ ನಟಿ ಇದೀಗ ತಾವು ಕರ್ನಾಟಕದಳು ಎಂದು ಹೇಳಿದ್ದು ಇದಕ್ಕೆ ಅಭಿಮಾನಿಗಳು ಸಖತ್ ಟ್ರೋಲ್ ಮಾಡುತ್ತಿದ್ದಾರೆ.
ವಿಕ್ಕಿ ಕೌಶಲ್ ಅಭಿನಯದ ಛಾವಾ ಚಿತ್ರದ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ರಶ್ಮಿಕಾ ಮಂದಣ್ಣ ನಾನು ಹೈದರಾಬಾದ್ ನವಳು ಎಂದು ಹೇಳಿದ್ದರು. ನಾನು ಅಲ್ಲಿಂದ ಒಬ್ಬಂಟಿಯಾಗಿ ಬಂದಿದ್ದೇನೆ. ಬಹುಶಃ ನಾನು ಈಗ ನಿಮ್ಮ ಕುಟುಂಬದ ಭಾಗ ಆಗಿದ್ದೇನೆ ಎಂದು ರಶ್ಮಿಕಾ ಹೇಳಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿತ್ತು. ಕನ್ನಡಿಗರು ರಶ್ಮಿಕಾ ಬಗ್ಗೆ ಟೀಕೆ ಹೊರಹಾಕಿದ್ದರು. ರಶ್ಮಿಕಾಗೆ ಕರ್ನಾಟಕ ಸಂಪೂರ್ಣವಾಗಿ ಮರೆತು ಹೋಗಿದೆ ಎಂದು ಅನೇಕರು ಟೀಕಿಸಿದ್ದರು.
ಇದೀಗ ರಶ್ಮಿಕಾ ಮಂದಣ್ಣ ಎಚ್ಚೆತ್ತಿದ್ದಾರೆ ಅನಿಸುತ್ತೆ. ಕೊನೆಗೂ ತಮ್ಮ ತಾಯ್ನಾಡು ಯಾವುದು ಅಂತ ಹೀಗಾ ಗೊತ್ತಾಯ್ತಾ ಎಂದು ನೆಟ್ಟಿಗರು ಗೇಲಿ ಮಾಡುತ್ತಿದ್ದಾರೆ. ಈ ದಿಢೀರ್ ಬದಲಾವಣೆ ಕಾರಣ ಏನಿರಬಹುದು ಎಂದು ಕಮೆಂಟ್ ಮಾಡುತ್ತಿದ್ದಾರೆ. ಸಿಕಂದರ್ ಚಿತ್ರದ ಪ್ರಚಾರ ಕಾರ್ಯಕ್ರಮದ ವೇಳೆ ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಮಾತನಾಡಿದ್ದರು. ಈ ವೇಳೆ ರಶ್ಮಿಕಾ ಮಂದಣ್ಣ ದಿಢೀರ್ ಅಂತ ನಾನು ಕರ್ನಾಟಕದಳು. ನನ್ನ ಭಾಷೆ ಕನ್ನಡ... ಎಂದು ಹೇಳಿದ್ದು ಪಕ್ಕದಲ್ಲೇ ಕುಳಿತಿದ್ದ ಸಲ್ಮಾನ್ ಇದನ್ನು ನೋಡಿ ಕ್ಷಣಕಾಲ ಕಕ್ಕಾಬಿಕ್ಕಿಯಾಗುತ್ತಾರೆ. ಕೊನೆಗೆ ಇದು ಕೂಡ ಸತ್ಯ ಎಂದು ತಮ್ಮ ತಾಯ್ನಾಡಿನ ಬಗ್ಗೆ ಹೇಳಿದ್ದಾರೆ.
Advertisement