ಆಸ್ಕರ್‌ ಸ್ಪರ್ಧೆಯ ಅಂಗಳಕ್ಕೆ 'ಕಾಂತಾರ ಪ್ರೀಕ್ವೆಲ್' ತಲುಪಿಸಲು ವಿಶೇಷ ಕಾರ್ಯತಂತ್ರ: ಚಲುವೇಗೌಡ

ಆಸ್ಕರ್ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವ ಮತ್ತು ಪ್ರಚಾರ ಮಾಡುವ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಅರಿವು ಮತ್ತು ಶಿಕ್ಷಣದ ಅವಶ್ಯಕತೆಯಿದೆ ಎಂದು ಇದೇ ವೇಳೆ ಅಭಿಪ್ರಾಯಪಟ್ಟರು.
chaluvegowda
ಹೊಂಬಾಳೆ ಫಿಲ್ಮ್ಸ್‌ನ ಸಹ ಸಂಸ್ಥಾಪಕ ಚಲುವೇಗೌಡ
Updated on

ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಮುಂಬೈನಲ್ಲಿ ಪ್ರತಿಷ್ಠಿತ ಜಾಗತಿಕ ಶ್ರವಣ ದೃಶ್ಯ ಮನರಂಜನೆ ಶೃಂಗಸಭೆಯಲ್ಲಿ, ಕನ್ನಡ ಚಿತ್ರರಂಗದ ಪ್ರತಿಷ್ಠಿತ ಚಲನಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್‌ನ ಸಹ ಸಂಸ್ಥಾಪಕ ಚಲುವೇಗೌಡ ಅವರು ಉಪಸ್ಥಿತರಿದ್ದರು,

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಈ ಮಹತ್ವದ ಕಾರ್ಯಕ್ರಮ ಭಾರತದ ಮಾಧ್ಯಮ ಮತ್ತು ಮನರಂಜನಾ ಕ್ಷೇತ್ರದ ಬೆಳವಣಿಗೆ, ನಾವೀನ್ಯತೆ ಮತ್ತು ಜಾಗತಿಕ ಸಾಮರ್ಥ್ಯವನ್ನು ಅನಾವರಣಗೊಳಿಸುವ ಗುರಿ ಹೊಂದಿದೆ.

ಸೂಪರ್ ಹಿಟ್ 'ಆರ್​ಆರ್​ಆರ್'​ ಚಿತ್ರದ ಸಂಕಲನಕಾರ ಎ.ಶ್ರೀಕರ್ ಪ್ರಸಾದ್ ಹಾಗೂ ಆಸ್ಕರ್ ಸಮಿತಿಯ ಸದಸ್ಯ ಮತ್ತು ಭಾರತೀಯ ಚಲನಚಿತ್ರ ಒಕ್ಕೂಟದ ತಾಂತ್ರಿಕ ಸಲಹೆಗಾರ ಉಜ್ವಲ್ ನಿರ್ಗುಡ್ಕರ್ ಅವರನ್ನೊಳಗೊಂಡ ಆಸಕ್ತಿದಾಯಕ ಚರ್ಚೆಯಲ್ಲಿ ಪಾಲ್ಗೊಂಡ ಚಲುವೇಗೌಡ ಅವರು, ಹೊಂಬಾಳೆ ಫಿಲ್ಮ್ಸ್‌ನ ಅಂತಾರಾಷ್ಟ್ರೀಯ ಯೋಜನೆಗಳ ಕುರಿತು ಬೆಳಕು ಚೆಲ್ಲಿದರು. ಅದರಲ್ಲೂ ವಿಶೇಷವಾಗಿ 'ಕಾಂತಾರ ಚಾಪ್ಟರ್ 1' ಚಿತ್ರವನ್ನು ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಾಗಿ ಕಾರ್ಯತಂತ್ರ ರೂಪಿಸಿ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದು, ಕನ್ನಡ ಚಿತ್ರರಂಗಕ್ಕೆ ಜಾಗತಿಕ ಮಟ್ಟದಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ.

ಆಸ್ಕರ್ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವ ಮತ್ತು ಪ್ರಚಾರ ಮಾಡುವ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಅರಿವು ಮತ್ತು ಶಿಕ್ಷಣದ ಅವಶ್ಯಕತೆಯಿದೆ ಎಂದು ಇದೇ ವೇಳೆ ಅಭಿಪ್ರಾಯಪಟ್ಟರು. "ಆಸ್ಕರ್ ಅರ್ಜಿ ಮತ್ತು ಪ್ರಚಾರ ಪ್ರಕ್ರಿಯೆಯ ಕುರಿತು ಸ್ಪಷ್ಟ ತಿಳುವಳಿಕೆಯ ಕೊರತೆ ಇದೆ. ಇಂತಹ ವಿಷಯಗಳ ಕುರಿತು ಕಾರ್ಯಾಗಾರಗಳನ್ನು ಆಯೋಜಿಸಿದರೆ, ಹೆಚ್ಚಿನ ಭಾರತೀಯ ಸಿನಿಮಾ ಸೃಷ್ಟಿಕರ್ತರಿಗೆ ಜಾಗತಿಕವಾಗಿ ತಮ್ಮ ಛಾಪು ಮೂಡಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

chaluvegowda
ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್‌ಗಳು, ನಿನ್ನ ಸಂಸಾರ ಹಾಳು ಮಾಡಲು ಸಂಚು: ಪಂಜುರ್ಲಿ ನುಡಿ ಕೇಳಿ ರಿಷಬ್ ಶೆಟ್ಟಿ ಶಾಕ್

ಕೆಜಿಎಫ್​​, ಕಾಂತಾರ ಮತ್ತು ಸಲಾರ್​ನಂತಹ ಯಶಸ್ವಿ ಚಿತ್ರಗಳನ್ನು ನೀಡಿದ ಹೊಂಬಾಳೆ ಫಿಲ್ಮ್ಸ್, ಶೃಂಗಸಭೆಯಲ್ಲಿ ಜಾಗತಿಕ ಖರೀದಿದಾರರು ಮತ್ತು ಮಾರಾಟಗಾರರನ್ನು ಒಂದುಗೂಡಿಸುವ "WAVES Bazaar"ನ ಸಹಯೋಗ ಪಾಲುದಾರರಾಗಿಯೂ ಕಾರ್ಯ ನಿರ್ವಹಿಸಿತು. ಈ ಮಾರುಕಟ್ಟೆ ವೇದಿಕೆಯು ಈಗಾಗಲೇ ಶೃಂಗಸಭೆಯ ಅತ್ಯಂತ ಯಶಸ್ವಿ ಉಪಕ್ರಮಗಳಲ್ಲಿ ಒಂದಾಗಿ ಹೊರಹೊಮ್ಮಿದ್ದು, ಗಡಿಗಳನ್ನು ಮೀರಿದ ಸಹಯೋಗಗಳಿಗೆ ಪ್ರೋತ್ಸಾಹ ನೀಡುತ್ತಿದೆ.

ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಅಧ್ಯಾಯ 1 - ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ. ಈ ಚಿತ್ರವು ಹೆಚ್ಚಿನ ನಿರೀಕ್ಷೆಯನ್ನು ಹುಟ್ಟುಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com