Operation Sindoor: 'ಇದು ಕೇವಲ ಒಂದು ಧ್ಯೇಯವಲ್ಲ, ಬದಲಾಗಿ ಒಂದು ಪವಿತ್ರ ಪ್ರತಿಜ್ಞೆ'; Actor Kichcha Sudeepa

ಭಾರತೀಯ ಸೇನೆ ಬುಧವಾರ ಮುಂಜಾನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
Actor Kichcha Sudeepa
ಕಿಚ್ಚಾ ಸುದೀಪ್
Updated on

ಬೆಂಗಳೂರು: 26 ಮಂದಿ ಭಾರತೀಯರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಬುಧವಾರ ಮುಂಜಾನೆ ಭಾರತೀಯ ಸೇನೆ ಪಾಕಿಸ್ತಾನದಲ್ಲಿ ನಡೆಸಿದ Operation Sindoor ಕುರಿತು ನಟ ಕಿಚ್ಚಾ ಸುದೀಪ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಭಾರತೀಯ ಸೇನೆ ಬುಧವಾರ ಮುಂಜಾನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳು ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರವನ್ನು ಇಂದು ನಸುಕಿನ ಜಾವ 1.05ರಿಂದ 1.30ರ ನಡುವೆ ಪ್ರಾರಂಭಿಸಿದವು. ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅದನ್ನು ಯಶಸ್ವಿಯಾಗಿ ನಾಶಪಡಿಸಲಾಯಿತು.

Actor Kichcha Sudeepa
Operation Sindoor: ಜೈಷ್, ಎಲ್‌ಇಟಿ, ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಗಳ ಕೇಂದ್ರ ಕಚೇರಿಗಳ ಮೇಲೆ IAF ಟಾರ್ಗೆಟ್; Video

ಭಾರತೀಯ ಸೇನೆಗೆ ನಟ ಕಿಚ್ಚಾ ಸುದೀಪ್ ಮೆಚ್ಚುಗೆ

ಇನ್ನು ಭಾರತೀಯ ಸೇನೆಯ ಕಾರ್ಯಾಚರಣೆಗೆ ದಕ್ಷಿಣ ಭಾರತದ ಖ್ಯಾತ ನಟ ಕಿಚ್ಚಾ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ನಟ ಕಿಚ್ಚಾ ಸುದೀಪ್, 'ಒಬ್ಬ ಭಾರತೀಯನಾಗಿ... ಈ ಪವಿತ್ರ ಮಣ್ಣಿನ ಮಗನಾಗಿ, ಪಹಲ್ಗಾಮ್‌ನಲ್ಲಿ ನೋವಿನ ನಡುಕವನ್ನು ನಾನು ಅನುಭವಿಸಿದೆ. ಇಂದು, ನಾನು ನ್ಯಾಯದ ಗುಡುಗನ್ನು ಅನುಭವಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಅಂತೆಯೇ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್: ಕೇವಲ ಒಂದು ಧ್ಯೇಯವಲ್ಲ, ಆದರೆ ಪವಿತ್ರ ಪ್ರತಿಜ್ಞೆ. ಪಹಲ್ಗಾಮ್ ದಾಳಿ ಮೂಲಕ ಭಾರತದ ಸಿಂಧೂರಕ್ಕೆ ಅಪಮಾನ ಮಾಡಲಾಗಿತ್ತು.

ಇದೀಗ ನಮ್ಮ ಧೈರ್ಯಶಾಲಿ ಹೃದಯಗಳು ಬೆಂಕಿ ಮತ್ತು ನಿಖರತೆಯಿಂದ ಅದರ ಗೌರವವನ್ನು ಪುನಃಸ್ಥಾಪಿಸಿವೆ. ನಮ್ಮ ಸಶಸ್ತ್ರ ಪಡೆಗಳಿಗೆ, ನನ್ನ ಅಂತ್ಯವಿಲ್ಲದ ವಂದನೆ. ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ಮತ್ತು ರಕ್ಷಣಾ ನಾಯಕತ್ವಕ್ಕೆ, ಎತ್ತರವಾಗಿ, ದೃಢವಾಗಿ ಮತ್ತು ನಿರ್ಭೀತವಾಗಿ ನಿಂತಿದ್ದಕ್ಕಾಗಿ ಧನ್ಯವಾದಗಳು ಎಂದರು.

ಅಂತೆಯೇ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ತೀಕ್ಷ್ಣವಾದ, ಘನತೆಯ ಮಾಹಿತಿಗಾಗಿ ವಂದನೆ. ಭಾರತ ಮರೆಯುವುದಿಲ್ಲ. ಭಾರತ ಕ್ಷಮಿಸುವುದಿಲ್ಲ. ಜೈ ಹಿಂದೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com