
ಉಡುಪಿ: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಸೋಮವಾರ ವಿಧಿವಶರಾಗಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಕೇಶ್ ಅವರ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್ ಪೇಟೆ ಅವರು ಖಚಿತಪಡಿಸಿದ್ದಾರೆ.
ರಾಕೇಶ್ ಅವರ ಸಾವು ಅವರ ಅಭಿಮಾನಿಗಳು ಹಾಗೂ ಆಪ್ತ ಬಳಗಕ್ಕೆ ಶಾಕ್ ನೀಡಿದ್ದು, ಸಾವಿಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ.
ರಾಕೇಶ್ ಅವರು 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ಗೆ ಅವರು ಆಯ್ಕೆಯಾದರು. ರನ್ನರ್ ಅಪ್ ತಂಡದಲ್ಲಿ ಇದ್ದರು. ನಂತರದ ಸೀಸನ್ 3ನಲ್ಲಿ ವಿನ್ನರ್ ಆದರು.
ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿಯೂ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
Advertisement