
ಬೆಂಗಳೂರು: ಖ್ಯಾತ ನಟ ದರ್ಶನ್ ತೂಗುದೀಪ ಅವರ ನೆಚ್ಚಿನ ಮೇಕಪ್ ಆರ್ಟಿಸ್ಟ್ ಹೊನ್ನೇಗೌಡ ಅವರು ನಿಧನರಾಗಿದ್ದಾರೆ.
ಈ ಬಗ್ಗೆ ಸ್ವತಃ ನಟ ದರ್ಶನ್ ಎಕ್ಸ್ ನಲ್ಲಿ ಮಾಹಿತಿ ನೀಡಿದ್ದು, '25 ವರ್ಷಗಳಿಂದ ನನ್ನೊಂದಿಗೆ ಕೆಲಸಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೇಗೌಡ್ರು ಇಂದು ಅಗಲಿದ ಸುದ್ದಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು' ಎಂದು ಸಂತಾಪ ಸೂಚಿಸಿದ್ದಾರೆ.
ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೇಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ' ಎಂದು ದರ್ಶನ್ ತಿಳಿಸಿದ್ದಾರೆ.
Advertisement