
ತಮಿಳು ನಟ ಕಮಲ್ ಹಾಸನ್ ಥಗ್ ಲೈಫ್ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ಮಾತನಾಡುವಾಗ ಕಮಲ್ ಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಅದು ನಟ ಶಿವರಾಜ್ಕುಮಾರ್ ಅವರ ಎದುರೇ ಈ ಹೇಳಿಕೆ ನೀಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಶಿವರಾಜ್ ಕುಮಾರ್ ಅವರು ಥಗ್ ಲೈಫ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಚಿತ್ರಕ್ಕೆ ಬೆಂಬಲ ನೀಡಿದರು. ವೇದಿಕೆ ಮೇಲೆ ಮಾತನಾಡಿದ್ದ ಕಮಲ್ ಹಾಸನ್ ಅವರು, ಡಾ.ರಾಜ್ಕುಮಾರ್ ಬಗ್ಗೆ ತಮಗಿರುವ ಗೌರವ ಹಂಚಿಕೊಂಡಿದ್ದರು. ಕನ್ನಡಿಗರ ಪ್ರೀತಿ, ಗೌರವಕ್ಕೆ ವಂದಿಸುತ್ತಲೇ ನಮ್ಮ ತಮಿಳುನಾಡು ಭಾಷೆಯಿಂದ ನಿಮ್ಮ ಕನ್ನಡ ಹುಟ್ಟಿದ್ದು ಎಂದು ಕಮಲ್ ಹಾಸನ್ ಹೇಳಿದ್ದಾರೆ.
ಕಮಲ್ ಹಾಸನ್ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement