

ಮುಂಬಯಿ: ಹಿಂದಿ ಚಿತ್ರರಂಗದ ಹಿರಿಯ ನಟ, ಸೂಪರ್ ಸ್ಟಾರ್ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಆಸ್ಪತ್ರೆಯಲ್ಲಿದ್ದು, ವೈದ್ಯರ ನಿಗಾದಲ್ಲಿ ಇದ್ದಾರೆ. ವರದಿಗಳ ಪ್ರಕಾರ, ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಹೆಚ್ಚಿನ ಪರೀಕ್ಷೆಗಳಿಗಾಗಿ ಅಲ್ಲಿಯೇ ಉಳಿದುಕೊಂಡಿದ್ದಾರೆ.
ಅವರ ಆರೋಗ್ಯದ ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ ಎಂದೂ ಕೂಡಾ ಸಾರ್ವಜನಿಕರಲ್ಲಿ ಕುಟುಂಬ ಮನವಿ ಮಾಡಿಕೊಂಡಿದೆ. 89 ವರ್ಷದ ನಟ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು ಮತ್ತು ಹೆಚ್ಚುವರಿ ಟೆಸ್ಟ್ ಹಿನ್ನೆಲೆ ಅಲ್ಲೇ ಇದ್ದಾರೆ.
ಅವರ ಡಿಸ್ಚಾರ್ಜ್ ದಿನಾಂಕದ ಕುರಿತು ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಿಲ್ಲ. ಪುತ್ರರಾದ ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್, ತಮ್ಮ ತಂದೆಯೊಂದಿಗೆ ಇರಲು ತಮ್ಮ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ. ಸೂಪರ್ ಸ್ಟಾರ್ ಡಿಸೆಂಬರ್‌ನಲ್ಲಿ ತಮ್ಮ 90ನೇ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.
ಸಿನಿಮಾ ವಿಷಯ ಗಮನಿಸೋದಾದ್ರೆ, ಧರ್ಮೇಂದ್ರ ಅವರು ಕೊನೆಯದಾಗಿ 2024ರಲ್ಲಿ ತೆರೆಕಂಡ 'ತೇರಿ ಬಾತೋ ಮೇ ಐಸಾ ಉಲ್ಜಾ ಜಿಯಾ' ಚಿತ್ರದಲ್ಲಿ ಕಾಣಿಸಿಕೊಂಡರು. ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ಮುಖ್ಯಭೂಮಿಕೆಯ ಚಿತ್ರವಿದು. ಮುಂದೆ ಖ್ಯಾತ ನಿರ್ದೇಶಕ ಶ್ರೀರಾಮ್ ರಾಘವನ್ ನಿರ್ದೇಶನದ 'ಇಕ್ಕಿಸ್' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಗಸ್ತ್ಯ ನಂದಾ ಮತ್ತು ಸಿಮರ್ ಭಾಟಿಯಾ ನಟನೆಯ ಸಿನಿಮಾ ಇದಾಗಿದೆ.
Advertisement