Kantara: Chapter 1 Release: ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ರುಕ್ಮಿಣಿ ವಸಂತ್: ರಿಷಭ್‌ ಶೆಟ್ಟಿ, ಪ್ರಗತಿಗೆ ಧನ್ಯವಾದ!

ಕಾಂತಾರ: ಚಾಪ್ಟರ್ 1 ಚಿತ್ರವು ನೆನ್ನೆ (ಅಕ್ಟೋಬರ್ 2) ದೇಶದಾದ್ಯಂತ ಬಿಡುಗಡೆಯಾಗಿದ್ದು, ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಗಳಿಕೆ ಕಂಡಿದೆ. ಅಲ್ಲದೆ, ಅಭಿಮಾನಿಗಳಿಗೆ ರಸದೌತಣವನ್ನೇ ಬಡಿಸಿದೆ.
Rukmini Vasanth
ರುಕ್ಮಿಣಿ ವಸಂತ್
Updated on

ರಿಷಭ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ: ಚಾಪ್ಟರ್ 1 ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ನಟಿ ರುಕ್ಮಿಣಿ ವಸಂತ್, ಭಾವನಾತ್ಮಕವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಚಿತ್ರದಲ್ಲಿ ಕೆಲಸ ಮಾಡಿದ್ದು ಸವಾಲು ಮಾತ್ರವಲ್ಲದೆ, ನನ್ನ ಜೀವನವನ್ನೇ ಬದಲಾಯಿಸಿದೆ ಎಂದು ಹೇಳಿದ್ದಾರೆ.

ಕಾಂತಾರ: ಚಾಪ್ಟರ್ 1 ಚಿತ್ರವು ನೆನ್ನೆ (ಅಕ್ಟೋಬರ್ 2) ದೇಶದಾದ್ಯಂತ ಬಿಡುಗಡೆಯಾಗಿದ್ದು, ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಗಳಿಕೆ ಕಂಡಿದೆ. ಅಲ್ಲದೆ, ಅಭಿಮಾನಿಗಳಿಗೆ ರಸದೌತಣವನ್ನೇ ಬಡಿಸಿದೆ.

ಈ ಬೆನ್ನಲ್ಲೇ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟಿ, 'ಒಂದು ವರ್ಷದ ಹಿಂದೆ, ಕನ್ನಡದ ಹೆಮ್ಮೆ ಎನಿಸಿರುವ ಕಾಂತಾರ: ಚಾಪ್ಟರ್ 1 ಚಿತ್ರತಂಡವನ್ನು ಸೇರುವ ಅವಕಾಶ ನನಗೆ ಸಿಕ್ಕಿತು. ಈ ಚಿತ್ರದಲ್ಲಿ ಕೆಲಸ ಮಾಡುವುದು ಒಂದು ದೊಡ್ಡ ಜವಾಬ್ದಾರಿಯೂ ಹೌದು, ಸಾಹಸವೂ ಹೌದು. ಈ ಚಿತ್ರ ನನ್ನ ಜೀವನವನ್ನೇ ಬದಲಾಯಿಸಿದೆ. ನಾನು ತುಂಬಾ ಕಲಿತಿದ್ದೇನೆ ಮತ್ತು ಅದಕ್ಕಾಗಿ ನಾನು ಬಹಳ ಕೃತಜ್ಞಳಾಗಿದ್ದೇನೆ' ಎಂದಿದ್ದಾರೆ.

ಮುಂದುವರಿದು, 'ನಮ್ಮ ಚಿತ್ರದ ನಾಯಕರೂ, ನಿರ್ದೇಶಕರೂ ಆದ ರಿಷಭ್ ಸರ್ ಅವರಿಗೆ ನಾನು ತುಂಬಾ ಧನ್ಯವಾದಗಳು. ನಿಮ್ಮ ಕಠಿಣ ಪರಿಶ್ರಮ, ದಯೆ ಮತ್ತು ಛಲ ಈ ಚಿತ್ರವನ್ನು ತುಂಬಾ ವಿಶೇಷವಾಗಿಸಿದೆ. ನನ್ನನ್ನು ನಂಬಿದ್ದಕ್ಕೆ ಮತ್ತು ನಾನು ಬೆಳೆಯಲು ಸಹಾಯ ಮಾಡಿದ್ದಕ್ಕೆ ಧನ್ಯವಾದಗಳು!. ಹೊಂಬಾಳೆ ತಂಡ ನನ್ನನ್ನು ನಿಮ್ಮ ಕುಟುಂಬದಲ್ಲಿ ಒಬ್ಬಳನ್ನಾಗಿಸಿಕೊಂಡಿದ್ದೀರಿ. ನಿಮಗೆ ನಾನು ಸದಾ ಚಿರಋಣಿ. ವಿಜಯ್ ಸರ್, ಚಲುವೇಗೌಡ, ಆದರ್ಶ್ ಹಾಗೂ ಚಿತ್ರದ ಎಲ್ಲರಿಗೂ ತುಂಬಾ ಧನ್ಯವಾದಗಳು' ಎಂದು ಬರೆದಿದ್ದಾರೆ.

Rukmini Vasanth
Box Office Collection: ಕೆಜಿಎಫ್ 2 ಗಿಂತ ಸ್ವಲ್ಪ ಹಿಂದುಳಿದ Kantara Chapter 1; ರಿಷಭ್ ಶೆಟ್ಟಿ ನಟನೆಯ ಚಿತ್ರ ಗಳಿಸಿದ್ದೆಷ್ಟು?

'ನಮ್ಮ ಕ್ಯಾಮೆರಾಮೆನ್ ಅರವಿಂದ್ ಮತ್ತು ಬೆಸ್ಟ್ ಆಫ್ ದಿ ಬೆಸ್ಟ್ ಕಾಸ್ಟ್ಯೂಮ್ ಡಿಸೈನರ್ ಪ್ರಗತಿ. ನೀವು ನನಗೆ ಸಂಪೂರ್ಣ ಹೊಸ ಲುಕ್ ನೀಡಿದ್ದೀರಿ ಮತ್ತು ನಾನು ಸುಂದರವಾಗಿ ಕಾಣ್ತಿದ್ದೀನಿ ಎಂದು ಹಲವರು ಕಾಂಪ್ಲಿಮೆಂಟ್ ನೀಡಿದ್ದು, ಅದಕ್ಕೆಲ್ಲ ನೀವೆ ಕಾರಣ. ನಿಮಗೂ ವಿಶೇಷವಾದ ಧನ್ಯವಾದಗಳು' ಎಂದಿರುವ ಅವರು ಸಂಗೀತ ನಿರ್ದೇಶಕರಿಂದ ಹಿಡಿದು ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ ಕಾಂತಾರ: ಚಾಪ್ಟರ್ 1 ಚಿತ್ರವು ಅಕ್ಟೋಬರ್ 2 ರಂದು ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ಬಿ ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ, ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣ ಮತ್ತು ವಿನೇಶ್ ಬಾಂಗ್ಲನ್ ಅವರ ನಿರ್ಮಾಣ ವಿನ್ಯಾಸವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com