ಬಿಡುಗಡೆಯಾದ ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ 'ಕಾಂತಾರ: ಚಾಪ್ಟರ್ 1'

2025ರಲ್ಲಿ ಯಶಸ್ಸು ಕಂಡ ಎರಡನೇ ಚಿತ್ರ ಇದಾಗಿದೆ. ಈ ಮೊದಲು ರಾಜ್ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ ಬಿಡುಗಡೆಯಾಗಿ ದಾಖಲೆ ನಿರ್ಮಿಸಿತ್ತು.
Kantara chapter 1
ಕಾಂತಾರ ಚಾಪ್ಟರ್ 1
Updated on

ಕಾಂತಾರ ಚಿತ್ರದ ಸೀಕ್ವೆಲ್ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸಾಫೀಸಿನಲ್ಲಿ ಧೂಳೆಬ್ಬಿಸುತ್ತಿದೆ. ಮೊನ್ನೆ ಅಕ್ಟೋಬರ್ 2ರಂದು ವಿಶ್ವಾದ್ಯಂತ ಬಿಡುಗಡೆಯಾಗಿ ಕೇವಲ ಎರಡು ದಿನಕ್ಕೆ ಚಿತ್ರ ಬರೋಬ್ಬರಿ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ.

2025ರಲ್ಲಿ ಯಶಸ್ಸು ಕಂಡ ಎರಡನೇ ಚಿತ್ರ ಇದಾಗಿದೆ. ಈ ಮೊದಲು ರಾಜ್ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ 100 ಕೋಟಿ ಕಲೆಕ್ಷನ್ ಮಾಡಿತ್ತು.

Kantara chapter 1
Box Office Collection: ಕೆಜಿಎಫ್ 2 ಗಿಂತ ಸ್ವಲ್ಪ ಹಿಂದುಳಿದ Kantara Chapter 1; ರಿಷಭ್ ಶೆಟ್ಟಿ ನಟನೆಯ ಚಿತ್ರ ಗಳಿಸಿದ್ದೆಷ್ಟು?

ರಿಷಬ್ ಶೆಟ್ಟಿ ನಿರ್ದೇಶನ, ನಾಯಕ ನಟರಾಗಿ ನಟಿಸಿರುವ ರುಕ್ಮಿಣಿ ವಸಂತ್ ನಾಯಕಿಯಾಗಿ, ಪ್ರಮುಖ ಪಾತ್ರದಲ್ಲಿ ಗುಲ್ಶನ್ ದೇವಯ್ಯ, ಜಯರಾಂ ಮೊದಲಾದವರು ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೊದಲ ದಿನ 62 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಆಗಿದೆ. ಈ ಸಿನಿಮಾ ನಿನ್ನೆ 43.65 ಕೋಟಿ ರೂಪಾಯಿ ಗಳಿಸಿದೆ.

ಭಾರತದಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರ 105.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ‘ಕೆಜಿಎಫ್ 2’ ಬಳಿಕ ಎರಡೇ ದಿನಕ್ಕೆ 100 ಕೋಟಿ ರೂಪಾಯಿ ಕ್ಲಬ್ ಸೇರಿದ ಚಿತ್ರ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com